ಉದಯವಾಹಿನಿ, ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಡಿ ನೋಟಿಫಿಕೇಷನ್ ಹಾಗೂ ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈಗಾಗಲೇ ಅವರ ಮೇಲ್ಮನವಿಯನ್ನು ಘನ ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿ ಕಲಿಕೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಎಚ್ಡಿಕೆ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಕಾನೂನು ಬಾಹಿರವಾಗಿ ಗಣಿಗಾರಿಕೆಗೆ ಅವಕಾಶ ನೀಡಿರುವ ಬಗ್ಗೆ ಈಗಾಗಲೇ ಲೋಕಾಯುಕ್ತರು ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಹಲಗೆ ವಡೇರಹಳ್ಳಿ ಡಿ ನೋಟಿಫಿಕೇಶನ್ ಪ್ರಕರಣದಲ್ಲೂ ಸಹ ಎಚ್.ಡಿ. ಕುಮಾರಸ್ವಾಮಿ ರವರು ಆರೋಪವನ್ನು ಎದುರಿಸುತ್ತಿದ್ದಾರೆ ಮತ್ತು ತಮ್ಮ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲೂ ಸಹ ಭೂ ಒತ್ತುವರಿ ಪ್ರಕರಣದಲ್ಲಿ ಸಿಲುಕಿದ್ದಾರೆ, ಇಷ್ಟೆಲ್ಲ ಪ್ರಕರಣಗಳನ್ನು ಮೈ ಮೇಲೆ ಹೊತ್ತಿಕೊಂಡಿರುವ ಕುಮಾರಸ್ವಾಮಿ ರವರು ಕೇಂದ್ರ ಸಚಿವರಾಗಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಹೀಗಾಗಿ ರಾಜ್ಯಪಾಲರು ಈ ಪ್ರಕರಣಗಳನ್ನು ತನಿಖೆ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರತಿ ಬಾರಿಯೂ ಅಭಿವೃದ್ಧಿಯನ್ನು ಕಡೆಗಣಿಸಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಕುಮಾರಸ್ವಾಮಿ ಅವರು ತಮ್ಮ ಮೈ ಸುತ್ತಲೂ ಅಂಟಿಕೊಂಡಿರುವ ಈ ಹಗರಣಗಳಿಗೆ ರಾಜಕೀಯ ಬಣ್ಣವನ್ನು ಬಳಿಯಬೇಡಿ ಏಕೆಂದರೆ ಈಗಾಗಲೇ ನೀವು ಈ ಪ್ರಕರಣವನ್ನು ರಾಜಕೀಯ ಪ್ರೇರಿತವೆಂದು ಹೇಳಿಕೆ ನೀಡಿದ್ದೀರಿ ನಿಮ್ಮ ಅವಧಿಯಲ್ಲಿ ನೀವು ಮಾಡಿರುವ ಭ್ರಷ್ಟಾಚಾರದ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯ ತನಿಖೆ ಮಾಡಬೇಕೆಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ತನಿಖೆಗೆ ಒಳಪಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!