ಉದಯವಾಹಿನಿ, ಪುಣೆ : ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದ್ದ ಬಸ್‌ನಲ್ಲಿ ಮಹಿಳೆಯ ಮೇಲೆ ಆತ್ಯಾಚಾರ ಎಸಗಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಶ್ರೀರೂರ್‌ ತಹಸಿಲ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ.
ತಾನು ಪೊಲೀಸರಿಗೆ ಶರಣಾಗಲು ಬಯಸುತ್ತೇನೆ ಎಂದು ಹೇಳಿ ಹೊರಟುಹೋಗಿದ್ದನಂತೆ, ದತ್ತಾತ್ರೇಯ ನೀರನ್ನು ತೆಗೆದುಕೊಂಡು ಹೋದ ನಂತರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸ್ವರ್ಗೇಟ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಮುಂದಿನ ತನಿಖೆ ನಡೆಸಲಿದ್ದಾರೆ.
ಬಂಧಿತ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸ್ಪರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ, ಆತ ಆರಂಭದಲ್ಲಿ ಮಹಿಳೆಯನ್ನು ಅಕ್ಕ ಎಂದು ಕರೆದು ಮಾತಾಡಿಸಿದ್ದ. ಬಳಿಕ ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್ ಫಾರ್ಮ್‌ ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್‌ಗೆ ಕರೆದೊಯ್ದಿದ್ದ, ಮಹಿಳೆ ಬಸ್ಸಿನೊಳಗೆ ಲೈಟ್ ಆನ್ ಇರದ ಕಾರಣ ಸ್ ಹತ್ತಲು ಹಿಂಜರಿದಿದ್ದಳು.
ಈ ವೇಳೆ, ಇದೇ ಸರಿಯಾದ ಬಸ್ ಎಂದು ಹೇಳಿ ಒಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.ಈ ಘಟನೆ ನಡೆದ ಬಳಿಕ ಪುಣೆಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಎನ್‌ಸಿಪಿ ಮತ್ತು ಎಂಎನ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು.
ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಲು 13 ತಂಡಗಳನ್ನು ರಚಿಸಿದ್ದರು. ಪುಣೆಯ ಶಿರೂರು ತಾಲೂಕಿನಲ್ಲಿ ಡೋನ್‌ಗಳು ಮತ್ತು ಶ್ವಾನದಳದ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಶೋಧ ಕಾರ್ಯಾಚರಣೆಯ ಭಾಗವಾಗಿ ಸ್ನಿಫರ್ ಡಾಗ್ಸ್ ಮತ್ತು ಡೋನ್‌ಗಳನ್ನು ಸಹ ನಿಯೋಜಿಸಲಾಗಿತ್ತು.ಆರೋಪಿ ತನ್ನ ಹುಟ್ಟೂರಾದ ಗುನಾತ್‌ನಲ್ಲಿರುವ ಕಬ್ಬಿನ ಗದ್ದೆಗಳಲ್ಲಿ ಅಡಗಿರಬಹುದು ಎಂದು ಶಂಕಿಸಲಾಗಿತ್ತು. 100ಕ್ಕೂ ಹೆಚ್ಚು ಪೊಲೀಸರು ಗುನಾತ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!