ಉದಯವಾಹಿನಿ, ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಲಾರಿ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಗೆ ಢಿಕ್ಕಿಯಾಗಿದೆ.ಢಿಕ್ಕಿ ರಭಸಕ್ಕೆ ಒಂದೇ ಕುಟುಂಬದ 13 ವರ್ಷದ ಮಗು, 20ವರ್ಷದ ಯುವತಿ,ಆಸ್ಪತ್ರೆಗೆ ಸಾಗಿಸುವಾಗ ಚಾಲಕ ಸಾವನ್ನಪ್ಪಿದ್ದು, ಹಿಂಬದಿಯ ಸೀಟ್ ನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ, ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
