ಉದಯವಾಹಿನಿ, ಭೋಪಾಲ್ : ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ ಎಂದು ಕೇಂದ್ರ ಮಾಜಿ ಸಚಿವ, ಬಿಜೆಪಿ ನಾಯಕ ಪ್ರಹ್ಲಾದ್ ಪಟೇಲ್ ಹೇಳಿದರು.
ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ವೀರಾಂಗನಾ ರಾಣಿ ಅವಂತಿಬಾಯಿ ಲೋಧಿ ಅವರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಬೇಡಿಕೆ ಅರ್ಜಿಗಳನ್ನು ‘ಭಿಕ್ಷಾಟನೆ’ಗೆ ಹೋಲಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ನಾಯಕರು ಬರುತ್ತಾರೆ, ಅವರಿಗೆ ಅರ್ಜಿಗಳಿಂದ ತುಂಬಿದ ಬುಟ್ಟಿಯನ್ನು ನೀಡಲಾಗುತ್ತದೆ. ಅವರನ್ನು ವೇದಿಕೆಯ ಮೇಲೆ ಹಾರ ಹಾಕಿ, ಅವರ ಕೈಯಲ್ಲಿ ಪತ್ರವನ್ನು ಇಡಲಾಗುತ್ತದೆ. ಇದು ಒಳ್ಳೆಯ ಅಭ್ಯಾಸವಲ್ಲ. ಎಂಸರು.
ಕೇಳುವ ಬದಲು, ನೀಡುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ. ಇದು ಸಂತೋಷದ ಜೀವನಕ್ಕೆ ಕಾರಣವಾಗುತ್ತದೆ. ಸುಸಂಸ್ಕೃತ ಸಮಾಜವನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ತಿಳಿಸಿದರು.
ಉಚಿತಗಳ ಮೇಲಿನ ಅತಿಯಾದ ಅವಲಂಬನೆಯು ಸಮಾಜವನ್ನು ಬಲಪಡಿಸುವ ಬದಲು ದುರ್ಬಲಗೊಳಿಸುತ್ತದೆ. ಈ ಭಿಕ್ಷುಕರ ಸೈನ್ಯವು ಸಮಾಜವನ್ನು ಬಲಪಡಿಸುತ್ತಿಲ್ಲ. ಅದು ದುರ್ಬಲಗೊಳಿಸುತ್ತಿದೆ. ಉಚಿತಗಳ ಕಡೆಗಿನ ಆಕರ್ಷಣೆಯು ಧೈರ್ಯಶಾಲಿ ಮಹಿಳೆಯರ ಗೌರವದ ಸಂಕೇತವಲ್ಲ. ನಾವು ಅವರ ಮೌಲ್ಯಗಳಿಗೆ ಅನುಗುಣವಾಗಿ ಬದುಕಬೇಕು ಎಂದು ಕರೆ ನೀಡಿದ್ದಾರೆ.
ಕಾಂಗ್ರೆಸ್ ಕಿಡಿ: ಪಟೇಲ್ ಅವರ ಹೇಳಿಕೆಗೆ ವಿರೋಧ ಪಕ್ಷ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜೀತು ಪಟ್ವಾರಿ, ಸಚಿವರನ್ನು ಟೀಕಿಸಿದ್ದು, ಅವರ ಹೇಳಿಕೆಗಳು ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!