ಉದಯವಾಹಿನಿ, ಕಾಪು : ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕಕ್ಕೆ ಪೂರ್ವಭಾವಿಯಾಗಿ ಲಕ್ಷ್ಮೀಜನಾರ್ದನ ದೇವಸ್ಥಾನದ ಸನ್ನಿಧಾನದಲ್ಲಿ ಇರಿಸಲಾದ ಗಂಗಾಜಲವನ್ನು ಮಾರಿಗುಡಿ ದೇವಸ್ಥಾನಕ್ಕೆ ತರಲಾಯಿತು.ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ನವಕುಂಭಗಳಲ್ಲಿ ಗಂಗಾಜಲ ತುಂಬಿಸಿ ಧಾರ್ಮಿಕ ವಿಧಿವಿಧಾನಗಳಿಂದ ಪೂಜಿಸಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ತಂದು ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಇರಿಸಲಾಗಿತ್ತು.
ದೇವಳದ ಪ್ರಧಾನ ತಂತ್ರಿ ಕೊರಂಗ್ರಪಾಡಿ ಕೆ.ಪಿ. ಕುಮಾರ ಗುರು ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ದಂಪತಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ದಂಪತಿ, ಕುಮಾರಗುರು ತಂತ್ರಿ ದಂಪತಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸುಂದರ ಶೆಟ್ಟಿ ದಂಪತಿ, ಶಾಸಕ ಗುರ್ಮ ಸುರೇಶ್ ಶೆಟ್ಟಿ ಅವರು ನವಕುಂಭದಲ್ಲಿ ತುಂಬಿಸಿದ ಗಂಗಾಜಲವನ್ನು ಮಾರಿಗುಡಿ ದೇವಸ್ಥಾನದವರೆಗೆ ಶೋಭಾಯಾತ್ರೆಯಲ್ಲಿ ತರಲಾಯಿತು.

Leave a Reply

Your email address will not be published. Required fields are marked *

error: Content is protected !!