ಉದಯವಾಹಿನಿ, ಚೆನ್ನೈ: ತಮಿಳುನಾಡಿನಲ್ಲಿ ಮದ್ಯ ವ್ಯಾಪಾರದ ಮೇಲೆ ಏಕಸ್ವಾಮ್ಯ ಸಾಧಿಸಲು ನಡೆಸಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಸಚಿವ ಸೆಂಥಿಲ್ ಬಾಲಾಜಿ ಮತ್ತಿತರ ಮನೆಗಳ ಮೇಳೆ ಇಡಿ ದಾಳಿ ನಡೆಸಿದೆ. ತಮಿಳುನಾಡು ರಾಜ್ಯ ಮದ್ಯ ಮಾರುಕಟ್ಟೆ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಸಚಿವ ಸೆಂಥಿಲ್ ಬಾಲಾಜಿ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಇಂದು ತಮಿಳುನಾಡಿನ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಾಲಾಜಿ, ಕೆಲವು ಸರ್ಕಾರಿ ಗುತ್ತಿಗೆದಾರರು ಮತ್ತು ಇತರ ಸಂಸ್ಥೆಗಳು ಸೇರಿದಂತೆ ರಾಜ್ಯದ ಸುಮಾರು 10 ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮದಲ್ಲಿ (ಟಿಎಎಸ್‌ಎಂಎಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ತನಿಖೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ.
ರಾಜ್ಯ ಸಾರಿಗೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಲಿಕ್ಕೆ ಸಂಬಂಧಿಸಿದ ಈ ಹಿಂದಿನ ಮನಿ ಲಾಂಡರಿಂಗ್ ತನಿಖೆಯಲ್ಲಿ ತಮಿಳುನಾಡು ವಿದ್ಯುತ್ ಸಚಿವರೂ ಆಗಿರುವ ಡಿಎಂಕೆ ನಾಯಕನ ಪಾತ್ರದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಅವರು ಫೆಡರಲ್ ಏಜೆನ್ಸಿ ಯಿಂದ ಬಂಧಿಸಲ್ಪಟ್ಟಿದ್ದಾರೆ ಮತ್ತು ಈಗ ಜಾಮೀನಿನ ಮೇಲೆ ಹೊರಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!