ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ತಮ 16ನೇ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದು, ಜೈನ, ಬೌದ್ಧ ಹಾಗೂ ಸಿಖ್‌್ಖ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಘೋಷಿಸಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.
ಇನ್ನು ಕೆಇಎ ಮೂಲಕ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ. 50ರಷ್ಟು ಮರು ಪಾವತಿಸಲು ನಿರ್ಧರಿಸಲಾಗಿದೆ.ಎಲ್‌ಕೆಜಿಯಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಎಲ್ಲ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ 3 ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದ್ದಾರೆ.
ಇದಕ್ಕಾಗಿ ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.
ಕಲಿಕಾ ಚಿಲುಮೆ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು, ಗಣಿತ ಗಣಕ ಕಾರ್ಯಕ್ರಮದಡಿ 3ರಿಂದ 5ನೇ ತರಗತಿ ದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದಾಗಿ ತಿಳಿಸಿದ್ದಾರೆ.
