ಉದಯವಾಹಿನಿ, ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನಲ್ಲಿ 40,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವನಿರೀಕ್ಷಿಸಲಾಗಿದೆ. ಅದರಂತೆ 2025-26ನೇ ಸಾಲಿಗೆ 40,000 ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ ಎಂದು ಹೇಳಿದರು.
ಪ್ರೀಮಿಯಂ ಮದ್ಯದ ಬೆಲೆಗಳನ್ನು ನೆರೆಯ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಸಾರವಾಗಿ ಪರಿಷ್ಕರಿಸುವುದರೊಂದಿಗೆ ಸರ್ಕಾರವು ಅಬಕಾರಿ ಸ್ಪ್ಯಾಬ್‌ಗಳನ್ನು ತರ್ಕಬದ್ದಗೊಳಿಸಿದೆ. 2025-26ರಲ್ಲೂ ಅಬಕಾರಿ ಫ್ಲ್ಯಾಬ್‌ಗಳನ್ನು ತರ್ಕಬದ್ದಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಜೊತೆಗೆ ಖಾಲಿ ಅಥವಾ ಲಭ್ಯವಿರುವ ಮದ್ಯದ ಪರವಾನಗಿಗಳನ್ನು ಪಾರದರ್ಶಕ ಇ-ಹರಾಜಿನ (ಆನ್‌ಲೈನ್) ಮೂಲಕ ಹಂಚಿಕೆ ಮಾಡಲು ಪ್ರಸ್ತಾಪಿಸಲಾಗಿದೆ. ಇದರಿಂದ ಹೆಚ್ಚುವರಿ ರಾಜಸ್ವ ಸಂಗ್ರಹಣೆಯಾಗುವ ನಿರೀಕ್ಷೆಯಿದ್ದು, ಇಲಾಖೆಯ ಎಲ್ಲಾ ಸೇವೆಗಳಿಗೆ ಸರ್ಕಾರವು ತಂತ್ರಾಂಶ ಸಿದ್ದಪಡಿಸಿ ಆನ್‌ಲೈನ್ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!