ಉದಯವಾಹಿನಿ ,ಬೆಂಗಳೂರು: ಭಾರತದ ಭವಿಷ್ಯದ ರೂವಾರಿಗಳು ಎಂದರೆ ಮಹಿಳೆಯರು. ತಾಯಿ, ಅಕ್ಕ, ತಂಗಿ ಪತ್ನಿ, ಮಗಳು ಎಲ್ಲ ಸ್ಥಾನಗಳನ್ನು ತುಂಬಿ ನಮ್ಮ ಅಭಿವೃದ್ದಿಗೆ ಶ್ರಮಿಸುವ ಮಹಿಳೆಯರು ನಿಸ್ವಾರ್ಥವಾಗಿ ಸೇವೆ ಸಲ್ಲಿಸಿ, ಕುಟುಂಬದ ಜೊತೆಗೆ ಸಮಾಜದ ಅಭಿವೃದ್ದಿಗೆ ಶ್ರಮಿಸುವಳು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಿಳಾ ಘಟಕ ಸಶಕ್ತ ಸಂಘಟನೆ ಇದೆ. ನಮ್ಮ ಕ್ಷೇತ್ರದ ಮಹಿಳಾ ಕಾರ್ಯಕರ್ತರಿಗೆ ಗೌರವಿಸುವ ದಿನವಾಗಿದೆ ಎಂದು ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಮಾಜಿ ಬಿಬಿಎಂಪಿ ಸದಸ್ಯ ಉಮೇಶ್ ಶೆಟ್ಟಿ ತಿಳಿಸಿದರು.
ಕಲೆ, ಸಾಹಿತ್ಯ ಚಲನಚಿತ್ರ, ರಂಗಭೂಮಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ರಾಜಕೀಯ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಪ್ರತಿನಿಧಿಸುತ್ತಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಶೇಕಡ ೫೦ರಷ್ಟು ಮೀಸಲಾತಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನೀಡಲಾಗಿದೆ ಎಂದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಮಾರುತಿಮಂದಿರ ವಾರ್ಡ್ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಗೋವಿಂದರಾಜನಗರ ಮಂಡಲ ಬಿಜೆಪಿ ಮಹಿಳಾ ಘಟಕ ವತಿಯಿಂದ, ಸಂಸ್ಕಾರ ಫೌಂಡೇಷನ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಪೌರ ಕಾರ್ಮಿಕ, ಆಶಾ ಕಾರ್ಯಕರ್ತರಿಗೆ ಹಾಗೂ ಸಾಧಕ ಮಹಿಳೆಯರಿಗೆ ಮಹಿಳಾ ರತ್ನ ಪ್ರಶಸ್ತಿ ಪ್ರಧಾನ ಮಹಿಳೆಯರಿಗೆ ಬಾಗಿನ ವಿತರಣೆ ಮಾಡಿ ಮಾತನಾಡಿದ ಅವರು ಕಾಲ ಬದಲಾಗಿದೆ ಪುರುಷರಷ್ಟೆ ಮಹಿಳೆಯರಿಗೆ ಸರಿಸಮಾನ ಹಕ್ಕು ಇದೆ. ಕಿತ್ತೂರು ರಾಣಿ ಚನ್ನಮ್ಮ ರವರಿಂದ ಇಂದಿನ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮು, ದೆಹಲಿ ಮುಖ್ಯಮಂತ್ರಿ ಸಹ ಮಹಿಳೆಯಾಗಿ ಸಾಧನೆ ಮಾಡಿ ತೋರಿಸಿದ್ದಾರೆ.
