ಉದಯವಾಹಿನಿ, ಬೆಂಗಳೂರು : ಕೊಪ್ಪಳದಲ್ಲಿ ಸ್ಥಾಪನೆಯಾಗುತ್ತಿರುವ ಬಲ್ದೋಟ್ ಸ್ಟೀಲ್ ಆ?ಯಂಡ್ ಪವರ್ ಲಿಮಿಟೆಡ್ ಕಾರ್ಖಾನೆ ಸ್ಥಾಪನೆ ಸ್ಥಾಪನೆಗೆ ಬೆಂಬಲ ನೀಡುವಂತೆ ದಲಿತ ಸಂಘಟನಾ ಸಮಿತಿ, ಭೀಮ ಘರ್ಜನೆ ವತಿಯಿಂದ ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಈ ಕುರಿತು ದಲಿತ ಸಂಘಟನಾ ಸಮಿತಿ, ಭೀಮ ಘರ್ಜನೆ ಸಂಘಟನೆ ಹೇಳಿಕೆ ಬಿಡುಗಡೆ ಮಾಡಿದ್ದು, ಕೊಪ್ಪಳ ಕಲ್ಯಾಣ ಕರ್ನಾಟಕದ ಒಂದು ಅವಿಭಾಜ್ಯ ಅಂಗವಾಗಿದೆ. ಈಗ ತಾನೇ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಒಂದು ಪ್ರದೇಶವು ಸಮಗ್ರ ಅಭಿವೃದ್ಧಿ ಹೊಂದಬೇಕಾದರೆ ವಾಣಿಜ್ಯ ವ್ಯವಹಾರಗಳು ವೃದ್ಧಿಯಾಗಬೇಕು, ಈ ನಿಟ್ಟಿನಲ್ಲಿ ಕಾರ್ಖಾನೆಗಳು ಅತಿ ಮುಖ್ಯ ಪಾತ್ರ ವಹಿಸುತ್ತವೆ. ಇದರಿಂದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಉದ್ಯೋಗವಕಾಶಗಳು ಹೆಚ್ಚುತ್ತವೆ. ಹೀಗಾಗಿ ಕಾರ್ಖಾನೆ ಸ್ಥಾಪನೆಗೆ ಸರ್ಕಾರ ವಿಶೇಷ ಆಸಕ್ತಿ ವಹಿಸಬೆಕು.
ಈಗಾಗಲೇ ಬಲ್ದೋಟ್ ಅಂಗ ಸಂಸ್ಥೆಯಾದ ಎಂ.ಎಸ್.ಪಿ.ಎಲ್ ಕಂಪನಿಯು ಅಗತ್ಯವಿರುವ ಉನ್ನತ ಮಟ್ಟದ ಮಾಲಿನ್ಯ ಯಂತ್ರೋಪಕರಣಗಳನ್ನು ಅಳವಡಿಸಿ ಪರಿಸರ ಮಾಲಿನ್ಯ ಕಡಿತಗೊಳಿಸುವಲ್ಲಿ ವಿಶೇಷವಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಗ್ರಾಮೀಣ ಭಾಗ ಅಭಿವೃದ್ಧಿಗೆ ಸಿ.ಎಸ್.ಆರ್ ಅನುದಾನದ ಅಡಿಯಲ್ಲಿ ಹೆಚ್ಚು ಹೆಚ್ಚು ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.
ಈಗಾಗಲೇ ಬಲ್ದೋಟ್ ಸಂಸ್ಥೆಯು ಇನ್ವೆಸ್ಟ್ ಕರ್ನಾಟಕ ೨೦೨೫ ರಲ್ಲಿ ಸುಮಾರು ರೂ ೫೪,೦೦೦ ಕೋಟಿ ಬಂಡವಾಳ ಹೂಡಿಕೆ ಯೋಜನೆಯನ್ನು ಪ್ರಕಟಿಸಿದ್ದು, ೧೫ ರಿಂದ ೨೦ ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಅದಲ್ಲದೆ ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಉನ್ನತ ತಂತ್ರಜ್ಞಾನ ಬಳಸುವುದಾಗಿ ಹೇಳಿಕೊಂಡಿದೆ.
ಬಲ್ದೋಟ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ ಕಂಪನಿ ಸ್ಥಾಪಿಸುವುದರಿಂದ ಕೊಪ್ಪಳದ ಜನ ಜೀವನಮಟ್ಟ ಸುಧಾರಿಸುವುದಲ್ಲದೇ ಒಳ್ಳೆಯ ಉದ್ಯೋಗ ಅವಕಾಶಗಳನ್ನು ಕೂಡ ಬದಗಿಸಿದಂತಾಗುತ್ತದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ಹೊಂದುವ ಆಶಾಭಾವನೆ ವ್ಯಕ್ತವಾಗುತ್ತದೆ, ಎಂಎಸ್‌ಪಿಎಲ್ ಕಂಪನಿ ಸ್ಥಾಪನೆಗೆ ಮುಖ್ಯಮಂತ್ರಿಗಳು ಅನುವು ಮಾಡಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!