ಉದಯವಾಹಿನಿ , ಬೆಂಗಳೂರು : ಬಸ್,ಮೆಟ್ರೋ ಏರಿಕೆ ಬೆನಲ್ಲೇ ರಾಜಧಾನಿ ಬೆಂಗಳೂರಿನ ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿಲಿದೆ. ಬೆಂಗಳೂರಿನ ಆಟೋ ಮೀಟರ್ ದರ ಏರಿಕೆ ವಾರದಲ್ಲಿ ಜಾರಿಗೆ ಬರಲಿದೆ. ಆಟೋ ದರ ಏರಿಕೆ ಬಗ್ಗೆ ಮಹತ್ವದ ಸಭೆ ನಡೆಯಲಿದೆ.
ಆಟೋದ ಕನಿಷ್ಠ ದರವನ್ನು 30 ರೂಪಾಯಿಯಿಂದ 40 ರೂಪಾಯಿಗೆ
ಹೆಚ್ಚಿಸಬೇಕೆಂದು ಆಟೋ ಚಾಲಕರು ಒತ್ತಾಯಿಸುತ್ತಿದ್ದಾರೆ. ಪ್ರತಿ ಕಿಲೋಮೀಟರಿಗೆ 15 ರೂಪಾಯಿ ದರವನ್ನು 20 ರೂಪಾಯಿಗೆ ಹೆಚ್ಚಿಸಬೇಕೆಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯಲ್ಲಿ ಸಭೆ ವಿವಿಧ ಆಟೋ ಚಾಲಕರ ಸಂಘಟನೆಗಳು ಈ ಸಭೆಯಲ್ಲಿ ಭಾಗವಹಿಸಿ, ಸದ್ಯದ ಸಮಸ್ಯೆಪಟ್ಟಿ ನೀಡಿದ್ದಾರೆ.
