ಉದಯವಾಹಿನಿ ,ಕ್ವೆಟ್ಟಾ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಸುರಂಗವೊಂದರಲ್ಲಿ ಬಲೂಚ್ ಉಗ್ರರು ರೈಲನ್ನು ಅಪಹರಿಸಿದ್ದಾರೆ. ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆ ವೇಳೆ ಗುಂಡಿನ ಕಾಳಗದಲ್ಲಿ 16 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ರೈಲಿನಲ್ಲಿದ್ದ 104 ಪ್ರಯಾಣಿಕರನ್ನು ಭದ್ರತಾ ಪಡೆಗಳು ರಕ್ಷಿಸಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಒಂಬತ್ತು ಬೋಗಿಗಳಲ್ಲಿ ಸುಮಾರು 400 ಪ್ರಯಾಣಿಕರನ್ನು ಹೊತ್ತ ಜಾಫರ್ ಎಕ್ಸ್‌ಪ್ರೆಸ್ ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದಾಗ ಗುಡಾಲಾರ್ ಮತ್ತು ಪಿರು ಕುನ್ರಿಯ ಪರ್ವತ ಪ್ರದೇಶದ ಬಳಿ ಸುರಂಗದಲ್ಲಿ ಶಸ್ತ್ರಸಜ್ಜಿತ ಉಗ್ರರು ತಡೆದಿದ್ದರು.ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌) ದಾಳಿಯ ಹೊಣೆ ಹೊತ್ತುಕೊಂಡಿತ್ತು..ರಾತ್ರಿ ಉಗ್ರರೊಂದಿಗೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 104 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಭದ್ರತಾ ಮೂಲಗಳು ಖಚಿತಪಡಿಸಿವೆ.ಇನ್ನೂ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ 16 ಉಗ್ರರು ಹತರಾಗಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ ಮತ್ತು ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ರಕ್ಷಿಸುವವರೆಗೆ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಮಾಧ್ಯಮಕ್ಕೆ ತಿಳಿಸಲಾಗಿದೆ. ಉಗ್ರರು ಕೆಲವು ಪ್ರಯಾಣಿಕರನ್ನು ಕರೆದೊಯ್ದಿದ್ದಾರೆ, ಈವರೆಗೆ 58 ಪುರುಷರು, 31 ಮಹಿಳೆಯರು ಮತ್ತು 15 ಮಕ್ಕಳು ಸೇರಿದಂತೆ ರಕ್ಷಿಸಲ್ಪಟ್ಟ ಪ್ರಯಾಣಿಕರನ್ನು ಮತ್ತೊಂದು ರೈಲಿನಲ್ಲಿ ಮಚ್ (ಕಚ್ಚಿ ಜಿಲ್ಲೆಯ ಪಟ್ಟಣ) ಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭದ್ರತಾ ಪಡೆಗಳು ಸುರಂಗವನ್ನು ಸುತ್ತುವರೆದಿವೆ ಮತ್ತು ಉಳಿದ ಪ್ರಯಾಣಿಕರನ್ನು ಸಹ ಶೀಘ್ರದಲ್ಲೇ ರಕ್ಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ಹೆಚ್ಚಿನ ವಿವರಗಳನ್ನು ನೀಡದಿದ್ದರೂ, ಸುರಂಗದಲ್ಲಿ ರೈಲನ್ನು ನಿಲ್ಲಿಸುವ ಬಗ್ಗೆ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸ್ವಲ್ಪ ಸಮಯದ ನಂತರ ಮಿಲಿಟರಿ ಪಡೆಗಳು ಸೇರಿದಂತೆ ಭದ್ರತಾ ಪಡೆಗಳು ಸುರಂಗ ಇರುವ ಒರಟು ಭೂಪ್ರದೇಶವನ್ನು ತಲುಪಿದ್ದಾರೆ ಎಂದು ಬಲೂಚಿಸ್ತಾನ್ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ಹೇಳಿದ್ದಾರೆ ರಿಂಡ್ ಹೇಳಿದರು.

Leave a Reply

Your email address will not be published. Required fields are marked *

error: Content is protected !!