ಉದಯವಾಹಿನಿ, ದಾವಣಗೆರೆ: ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಬೇಕು ಹಾಗೂ ಕ್ರಷರ್ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿ ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.ಗ್ರಾಮ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಹೋರಾಟ ನಡೆಸಿದ ಜನರು ಜಿಲ್ಲಾಡಳಿತದ ಗಮನ ಸೆಳೆಯಲು ದಾವಣಗೆರೆಗೆ ಬಂದಿದ್ದರು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಆರುಂಡಿ ಗ್ರಾಮದಲ್ಲಿ 20 ವರ್ಷಗಳಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿದೆ.6 ಕಲ್ಲು ಕ್ಯಾರಿಗಳಿದ್ದು, ಪರಿಸರಕ್ಕೆ ಧಕ್ಕೆ ಉಂಟಾಗಿದೆ. ನಿಯಮ ಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿ, ಹೈನುಗಾರಿಕೆ ಹಾಗೂ ಜನಜೀವನಕ್ಕೆ ತೊಂದರೆಯಾಗುತ್ತಿದೆ. ಎರಡು ಕೆರೆಗಳ ನೀರು ಸಂಪೂರ್ಣ ಕಲುಷಿತಗೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. . ನಿಯಮ ಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿ, ಹೈನುಗಾರಿಕೆ ಹಾಗೂ ಜನಜೀವನಕ್ಕೆ ತೊಂದರೆಯಾಗುತ್ತಿದೆ. ಎರಡು ಕೆರೆಗಳ ನೀರು ಸಂಪೂರ್ಣ ಕಲುಷಿತಗೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕ್ರಷರ್‌ಗಳಲ್ಲಿ ದೊಡ್ಡ ಯಂತ್ರಗಳನ್ನು ಬಳಸಲಾಗುತ್ತಿದೆ. ಭಾರಿ ಸ್ಪೋಟಕಗಳಿಂದ ಗ್ರಾಮಸ್ಥರು ಕಂಗೆಟ್ಟು ಹೋಗಿದ್ದಾರೆ. ಹಗಲು-ರಾತ್ರಿ ಸಂಚರಿಸುವ ಭಾರಿ ಗಾತ್ರದ ವಾಹನಗಳಿಂದ ಗ್ರಾಮದ ರಸ್ತೆಗಳು ಹಾಳಾಗಿವೆ. ಪರಿಸರ ಮಾಲಿನ್ಯ ಉಂಟಾಗಿದ್ದು, ಕೆರೆಯ ನೀರು ಕಲುಷಿತಗೊಂಡಿದೆ. ರಾಸಾಯನಿಕಗಳು ಕೆರೆಯ ಒಡಲು ಸೇರಿ ನೀರು ವಿಷಕಾರಿಯಾಗಿದೆ. ಜನ ಮತ್ತು ಜಾನುವಾರುಗಳಿಗೆ ತೊಂದರೆ ಉಂಟಾಗಿದೆ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *

error: Content is protected !!