ಉದಯವಾಹಿನಿ, ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯದಲ್ಲಿ ಹೆಚ್ಚುವರಿ ಅದಾಯದ (ರೆನ್ ಸರ್ ಪಾಸ್) ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ರಾಜ್ಯದ ಸಾಲದ ಕುರಿತು ಆರೋಪ ಪ್ರತ್ಯಾರೋಪಗಳು ಮಾತಿನ ಚಕಮಕಿ ನಡೆಯಿತು.ವಿರೋಧಪಕ್ಷದ ನಾಯಕ ಆ‌ರ್.ಅಶೋಕ್, 4.09 ಲಕ್ಷ ಕೋಟಿ ಗಾತ್ರದ ಬಜೆಟ್‌ನಲ್ಲಿ 3.11 ಲಕ್ಷ ಕೋಟಿ ರೂ. ರಾಜಸ್ವ ವೆಚ್ಚವನ್ನು ನಿಗದಿ ಮಾಡಲಾಗಿದೆ. ಇದು ಶೇ.76 ರಷ್ಟಿದ್ದರೆ ಬಂಡವಾಳ ವೆಚ್ಚಕ್ಕೆ ಕೇವಲ 17.4 ರಷ್ಟು ಮೀಸಲಿಡಲಾಗಿದೆ. 11.36 ಸಾವಿರ ಕೋಟಿ ಬಂಡವಾಳ ವೆಚ್ಚದಲ್ಲಿ ಯಾವ ಆಸ್ತಿ ಸೃಜನೆ ಮಾಡಲು ಸಾಧ್ಯ, ಸಾಲ ಮರುಪಾವತಿಗಾಗಿ 26,470 ಕೋಟಿ ರೂ. ಮೀಸಲಿಡಲಾಗಿದೆ.
19ಸಾವಿರ ಕೋಟಿ ರಾಜಸ್ವ ಕೊರತೆಯಿದೆ. ರಾಜ್ಯದ ಒಟ್ಟು ಸಾಲ 7.64 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ವಿವರಿಸಿದರು. 2021-22ನೇ ಸಾಲಿನಲ್ಲಿ ಕೋವಿಡ್ ನಂತಹ ಸಂಕಷ್ಟ ಸಂದರ್ಭವಲ್ಲೂ ರಾಜ್ಯಸರ್ಕಾರ 80,641 ಕೋಟಿ ರೂ. ಸಾಲ ಮಾಡಿತ್ತು. 2022-23ನೇ ಸಾಲಿನಲ್ಲಿ 44,549 ಕೋಟಿ ರೂ.. 2023-24ನೇ ಸಾಲಿನಲ್ಲಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ 90,280 ಕೋಟಿ, ಕಳೆದ ಬಜೆಟ್‌ನಲ್ಲಿ 1.07 ಕೋಟಿ ಮುಂದಿನ ವರ್ಷಕ್ಕೆ 1:10 ಲಕ್ಷ ಕೋಟಿ ಸಾಲ ಮಾಡಲಾಗುತ್ತಿದೆ.
ಸಾಲ ಪಡೆದು ಆಸ್ತಿ ಸೃಷ್ಟಿಸಬೇಕೆಂದು 2017 ರಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಆನಂತರ ಸಿದ್ದರಾಮಯ್ಯ ನವರೂ ಡಲ್ ಆಗಿದ್ದಾರೆ. ಅವರ ಬಜೆಟ್ ಕೂಡ ಡಲ್ ಆಗಿದೆ. ಈಗ ಸಾಲ ಮಾಡಿ ಅವರ ರಾಜಕೀಯ ಪ್ರಣಾಳಿಕೆಯ ಈಈಡೇರಿಕೆಗೆ ಖರ್ಚು ಮಾಡುತ್ತಿದ್ದಾರೆ. ಎಲ್ಲಾ ಪೀ ಫ್ರೀ ಕೊಡಲು ಸಾಲದ ಹಣ ದುರ್ಬಳಕೆಯಾಗುತ್ತಿದ್ದು ಇದು ಮೋಸ ಮತ್ತು ಅನ್ಯಾಯ ಎಂದು ಆರೋಪಿಸಿದರು. ಅಭಿವೃದ್ಧಿ ಎಂಬುದು ಶೂನ್ಯವಾಗಿದೆ ಎಂದು ಆರ್.ಅಶೋಕ್ ಹೇಳುತ್ತಿದ್ದಂತೆ, ಸಚಿವ ಚಲುವರಾಯಸ್ವಾಮಿ ಪ್ರತಿ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ದೊರೆಯುತ್ತಿದೆ. ಇದು ಅಭಿವೃದ್ಧಿಯಲ್ಲವೇ? ಎಂದು ಪ್ರಶ್ನಿಸಿದರು.
ಸಾಲದ ಮೊತ್ತವನ್ನೂ ಕಳೆದ ವರ್ಷ 1.81 ಲಕ್ಷ ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿತ್ತು. ಆದರೆ ಅಷ್ಟು ಸಂಗ್ರಹವಾಗಿಲ್ಲ, ಮುಂದಿನ ವರ್ಷದಲ್ಲಿ 2.8 ಲಕ್ಷ ಕೋಟಿ ರೂ. ಆದಾಯದ ಗುರಿ ನಿಗದಿಪಡಿಸಲಾಗಿದೆ. ಅಭಿವೃದ್ಧಿ ಗುರಿಗಿಂತ ಅಬಕಾರಿ ಗುರಿ ಹೆಚ್ಚಾಗಿದೆ. ಜನರನ್ನು ಮದ್ಯವಾನ ಪ್ರಿಯರನ್ನಾಗಿ ಮಾಡಲಾಗುತ್ತಿದೆ. 16 ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ತುಂಬಾ ದುರ್ಬಲರಾಗಿದ್ದಾರೆ. ಮರ ಮುಪ್ಪಾದರೂ ಹುಳಿ ಮುಪ್ಪೇ? ಎಂಬ ಗಾದೆ ಮಾತು ಸಿದ್ದರಾಮಯ್ಯ ನವರಿಗೆ ಅನ್ವಯವಾಗುವುದಿಲ್ಲ ಎಂದು ಲೇವಡಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!