ಉದಯವಾಹಿನಿ , ಬೆಂಗಳೂರು: ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಗುಣವನ್ನು ಕೆ.ಎಚ್.ಪಾಟೀಲ ಅವರು ಹೊಂದಿದ್ದು ಬೆಂಗಳೂರಿನ ‘ಕೆ.ಎಚ್.ಪಾಟೀಲ್ ಸ್ಕೂಲ್ ಆಫ್ ಲಾ’ ಉದ್ಘಾಟಿಸಲು ನನಗೆ ನಿಜಕ್ಕೂ ಸಂತೋಷ ಎನಿಸುತ್ತಿದೆ. ಈ ಕಾಲೇಜಿನಲ್ಲಿ ಇಡೀ ರಾಷ್ಟ್ರವೇ ಮೆಚ್ಚುವಂತಹ ಗುಣಮಟ್ಟದ ಕಾನೂನು ಶಿಕ್ಷಣ ದೊರೆಯುವಂತಾಗಲಿ ಎಂದು ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಹಕಾರ ರಂಗದ ಭೀಷ್ಮ ಕೆ.ಎಚ್.ಪಾಟೀಲ ಅಭಿಮಾನಿ ಬಳಗ, ಬೆಂಗಳೂರು ನಗರದ ವಿವಿಧ ಸಹಕಾರ ಸಂಘಗಳು ಹಾಗೂ ಸಹಕಾರ ರಂಗದ ಭೀಷ್ಮ ಕೆ.ಎಚ್.ಪಾಟೀಲ ಮೆಮೋರಿಯಲ್ ಟ್ರಸ್ಟ್ ಬೆಂಗಳೂರು ಇವರು ಹಮ್ಮಿಕೊಂಡಿದ್ದ ಕೆ.ಎಚ್.ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಮತ್ತು ಕೆ.ಎಚ್.ಪಾಟೀಲ ಸ್ಕೂಲ್ ಆಫ್ ಲಾ ಬೆಂಗಳೂರು ಇದರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿಗಳು, ಎಂ.ವೀರಪ್ಪ ಮೊಯಿಲಿ ಅವರು ಲಾ ಶಾಲೆಯ ಲಾಂಛನ ಉದ್ಘಾಟಿಸಿ ಮಾತನಾಡಿ ಕೆ.ಎಚ್.ಪಾಟೀಲ ಸ್ನೇಹಶೀಲರು ಎಂದರು.
ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ವೀರೇಂದ್ರ ಪಾಟೀಲರು ಮತ್ತು ಎಸ್.ಬಂಗಾರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದವರು ಎಂದರು.
ಮಾಜಿ ಸಚಿವ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾತನಾಡಿ, ಎಪಿಎಂಸಿ ಅಧ್ಯಕ್ಷನಾಗುವ ನನ್ನ ಕನಸಿಗೆ ವಿರುದ್ಧವಾಗಿ ನನ್ನ ಜಿಲ್ಲೆಯ ಐವರು ಶಾಸಕರು ಕೆ.ಎಚ್.ಪಾಟೀಲರ ಬಳಿ ದೂರು ನೀಡಿದ್ದರು. ಆಗ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದ ಕೆ.ಎಚ್.ಪಾಟೀಲರು ನನ್ನನ್ನು ಹುರಿದುಂಬಿಸಿದ್ದರು ಎಂದು ಸ್ಮರಿಸಿದರು.ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಎಸ್.ಹೊರಟ್ಟಿ ಮಾತನಾಡಿ ಕೆಎಚ್.ಪಾಟೀಲ ಮತ್ತು ಎಂ.ಎನ್.ವೆಂಕಟಾಚಲಯ್ಯ ಅವರಂತೆ ಶ್ರೇಷ್ಠ ವ್ಯಕ್ತಿಗಳಾಗಲು ಸಾಧ್ಯವಿಲ್ಲ. ಈ ದಿಸೆಯಲ್ಲಿ ಎಚ್.ಕೆ.ಪಾಟೀಲರು ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಗೃಹಮಂತ್ರಿ ಡಾ.ಜಿ.ಪರಮೇಶ್ವರ್, ಸಮಾನತೆ ಬರಬೇಕಾದರೆ ಪ್ರತಿಯೊಬ್ಬ ಭಾರತೀಯ ಕಾನೂನು ಓದಬೇಕು. ಕೆ.ಎಚ್.ಪಾಟೀಲ ಲಾ ಶಾಲೆ ರಾಷ್ಟ್ರಕ್ಕೆ ಮಾದರಿಯಾಗಲಿ ಎಂದರು.ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಚಿವರಾದ ಶರಣಗೌಡ ಪಾಟೀಲ, ೫ನೇ ಹಣಕಾಸು ಆಯೋಗದ ಅಧ್ಕಕ್ಷ ಡಾ.ಸಿ.ನಾರಾಯಣಸ್ವಾಮಿ, ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ತಿಮ್ಮಾಪುರ, ರುದ್ರಪ್ಪ ಲಮಾಣಿ, ಶಾಸಕ ರಿಜ್ವಾನ್ ಹರ್ಷದ್ ಸೇರಿದಂತೆ ರಾಜ್ಯದ ವಿವಿಧ ಕ್ಷೇತ್ರಗಳಿಂದ ಆಗಮಿಸಿದ ಹಲವಾರು ಶಾಸಕರು, ಸಹಕಾರಿ ಸಂಘಗಳ ಧುರೀಣರು, ಪಾಟೀಲರ ಅಭಿಮಾನಿಗಳು ಮತ್ತಿತರರು ಇದ್ದರು.
