ಉದಯವಾಹಿನಿ,ಬೆಂಗಳೂರು: ಕೇಂದ್ರದಿಂದ ನಾವು ಪುಕ್ಸಟ್ಟೆಯಾಗಿ ಅಕ್ಕಿ ಕೊಡುವಂತೆ ಕೇಳಿಲ್ಲ. ಅವರೇನು ಪಕ್ಸಟ್ಟೆಯಾಗಿ ಕೊಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಕೇಂದ್ರದಿಂದ ಅಕ್ಕಿ ಸರಬರಾಜು ನಿಲುಗಡೆ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ಕೊಡುವಂತೆ ನಾವು ಪಕ್ಸಟ್ಟೆ ಕೇಳಿಲ್ಲ.ಜೂಲೈ 1 ರಿಂದ ಅನ್ನ ಭಾಗ್ಯ ಯೋಜನೆಯಡಿ 10 kg ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ ಎಂದು ವಾಗ್ಧಾಳಿ ಮಾಡಿದ್ದಾರೆ. ಸಿಎಂ ಈಗಾಗಲೇ ಛತ್ತಿಸ್ಘಡ, ತೆಲಾಂಗಣ ಸೇರಿದಂತೆ ವಿವಿಧ ರಾಜ್ಯದ ಜತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ನಮಗೆ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ಈ ರೂಪುರೇಷೆಯ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಆಕ್ರೊಶ ಹೊರಹಾಕಿದ್ದಾರೆ.
