ಉದಯವಾಹಿನಿ, ವಾಷಿಂಗ್ಟನ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕ್ಷೇಮವಾಗಿ ವಾಪಸ್ ಆಗಿರುವ ನಾಲ್ವರು ಗಗನಯಾತ್ರಿಗಳನ್ನು ನಾಸಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಗಗನಯಾತ್ರಿಗಳನ್ನು ಅವರು ಧರಿಸಿದ್ದ ವಿಶೇಷ ಸ್ಪೇಸ್ ಸೂಟ್ ನಲ್ಲೇ ಹೆಲಿಕಾಪ್ಟರ್ ಮೂಲಕ ಅವರನ್ನು ನಾನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಷ್ಟು ದಿನ ಬಾಹ್ಯಾಕಾಶದಲ್ಲಿದ್ದ ಕಾರಣ ಇಲ್ಲಿನ ವಾತಾವರಣಕ್ಕೆ ಗಗನಯಾತ್ರಿಗಳು ಹೊಂದಿಕೊಳ್ಳಬೇಕಿದೆ. ಅವರ ಆರೋಗ್ಯ ಸ್ಥಿತಿ ಸ್ಪಂದಿಸಬೇಕಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತೆ. ಸಮಗ್ರವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ನಾಸಾ ತಿಳಿಸಿದೆ.
ಕಡಲ ತೀರದ ಮೇಲೆ ಇಳಿದ ನೌಕೆಯಿಂದ ಮೊದಲಿಗೆ ನಾಸಾ ಗಗನಯಾತ್ರಿ ಹೇಗ್ ರನ್ನು ಹೊರಗೆ ತರಲಾಯಿತು. ನಂತರ ರಷ್ಯಾದ ಗಗನನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಅವರನ್ನು ಹೊರಗೆ ತರಲಾಯಿತು. ಇವರಿಬ್ಬರೂ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಸುನೀತಾ ಮತ್ತು ವಿಲ್ಲೋರ್ ಅವರನ್ನು ಕರೆತರಲು 8 ದಿನಗಳ ಹಿಂದಷ್ಟೇ ಬಾಹ್ಯಾಕಾಶಕ್ಕೆ ತೆರಳಿದ್ದರು.
ತಕ್ಷಣ ಎದ್ದು ನಿಲ್ಲಲು ಆಗದಿದ್ದರೂ ಇವರಿಬ್ಬರ ದೇಹಸ್ಥಿತಿಯಲ್ಲಿ ಅಷ್ಟಾಗಿ ಬದಲಾವಣೆ ಕಂಡುಬಂದಂತೆ ಕಾಣಲಿಲ್ಲ. ಇನ್ನು ಮೂರನೆಯದಾಗಿ ಸುನೀತಾ ವಿಲಿಯಮ್ ಅವರನ್ನು ಹೊರಗೆ ಕರೆತರಲಾಯಿತು. ಬರೋಬ್ಬರಿ 9 ತಿಂಗಳ ಬಳಿಕ ಭೂಮಿಗೆ ಬಂದ ಸುನೀತಾರ ಸಂತಸಕ್ಕೆ ಪಾರವೇ ಇರಲಿಲ್ಲ. ಎದ್ದು ನಿಲ್ಲಲೂ ಆಗದ ಸುನಿತಾ ಕುಳಿತಲ್ಲೇ ನಗುಮೊಗದೊಂದಿಗೆ ಕೈಬೀಸಿ ಸಂಭ್ರಮ ವ್ಯಕ್ತಪಡಿಸಿದರು.
13.28ಕ್ಕೆ ಶುರುವಾಗಿ ಕೊನೆಯದಾಗಿ ಸುನೀತಾ ಜತೆಗಿದ್ದ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಲೋರ್ ಅವರನ್ನು ಹೊರಗೆ ತರಲಾಯಿತು. ಈ ಎಲ್ಲಾ ಪ್ರಕ್ರಿಯೆಗಳು ನಸುಕಿನ 3. 4.27ರ ಸುಮಾರಿಗೆ ಮುಕ್ತಾಯಗೊಂಡಿತು ಎಂದು ವರದಿಯಾಗಿದೆ.ಸುನೀತಾ ವಿಲಿಯಮ್ಸ್ ಸೇರಿ ನಾಲ್ವರು ಗಗನಯಾತ್ರಿಗಳಿದ್ದ ನೌಕೆಯ ಕ್ಯಾಪ್ಸುಲ್ ಸಮುದ್ರದಲ್ಲಿ ಬಿದ್ದು ತೇಲುತ್ತಿದ್ದಂತೆಯೇ ಕೆಲವೇ ಕ್ಷಣಗಳಲ್ಲಿ ಮೂರು ಬೋಟ್ಗಳಲ್ಲಿ ಅಮೆರಿಕ ನೌಕಾಪಡೆ ಸ್ಥಳಕ್ಕೆ ಧಾವಿಸಿತು. ತಕ್ಷಣ ಸಿದ್ಧವಾಗಿ ನಿಂತಿದ್ದ ಸ್ಪೇಸ್ ಎಕ್ಸ್‌ನ ರಿಕವರಿ ಶಿಪ್ ಕೂಡ ಸ್ಥಳಕ್ಕೆ ಧಾವಿಸಿತು. ನೌಕಾಪಡೆ ಸಿಬ್ಬಂದಿ ಮೊದಲಿಗೆ ಗಗನಯಾತ್ರಿಗಳಿದ್ದ ಕ್ಯಾನ್ಸುಲ್ ನಿಯಂತ್ರಣಕ್ಕೆ ರೋಪ್ ಗಳಿಂದ ಕಟ್ಟಿ ಹಡಗಿನ ಬಳಿಗೆ ಎಳೆದೊಯ್ದರು. ಬಳಿಕ ಅತ್ಯಂತ ನಾಜೂಕಾಗಿ ಕ್ಯಾನ್ಸುಲ್ ಅನ್ನು ಹಡಗಿಗೆ ಸ್ಥಳಾಂತರ ಮಾಡಿದರು. ಇದಾದ ಕೆಲವೇ ಹೊತ್ತಿನಲ್ಲಿ ನಟ್ಟು, ಬೋಲ್ಟ್ಗಳಿಂದ ಟೈಟಾಗಿದ್ದ ಕ್ಯಾಪ್ಟು ಲ್‌ನ ಡೋರ್ ಅನ್ನು ತೆಗೆಯಲಾಯಿತು.
