ಉದಯವಾಹಿನಿ, ಕೆ.ಆರ್.ಪುರ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನೀಡುವುದಾಗಿ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸುತ್ತಿದ್ದು ಇದರ ಅಂಗವಾಗಿ ಮಾರತ್ತಹಳ್ಳಿ ಬ್ಲಾಕ್ ವತಿಯಿಂದ ನಾಗೋಂಡನಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮಹದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವ ಅವಶ್ಯಕತೆ ಯಿದ್ದು, ನೂತನ ಬ್ಲಾಕ್ ಅಧ್ಯಕ್ಷರು ಬೂತ್ ಕಮಿಟಿಗಳನ್ನು ಮೊದಲು ರಚಿಸುವಂತೆ ತಿಳಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರಹಳ್ಳಿ ನಾಗೇಶ್ ಅವರು ಮಾತನಾಡಿ
ಪಕ್ಷಕ್ಕೆ ದುಡಿಯುತ್ತಿರುವ ನಿಷ್ಠಾವಂತರಿಗೆ ಪಕ್ಷದಲ್ಲಿ ಹುದ್ದೆಗಳನ್ನು ನೀಡುವುದಾಗಿ ತಿಳಿಸಿದರಲ್ಲದೆ, ಕೆಪಿಸಿಸಿ ಅಧ್ಯಕ್ಷರು ಮಹದೇವಪುರ ಕ್ಷೇತ್ರಕ್ಕೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಹೆಚ್.ನಾಗೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರಹಳ್ಳಿ ನಾಗೇಶ್, ಪೂರ್ವ ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ನಂದಕುಮಾರ್, ಬ್ಲಾಕ್ ಅಧ್ಯಕ್ಷರಾದ ವಿನೋದ, ಮುಖಂಡರಾದ ಗಫಾರ್ ಬೇಗ್, ಪ್ರೇಮ್ ಕುಮಾರ್, ಲಾವಣ್ಯ ಯಾದವ್, ಎಸ್ಸಿ ಘಟಕದ ಅಧ್ಯಕ್ಷ ಬಸವರಾಜ್, ಮೈನಾರಿಟಿ ಅಧ್ಯಕ್ಷ ಡೆವಿಡ್ ಅಂಟೋನಿ ಸೇರಿದಂತೆ ಮತ್ತಿತರರು ಇದ್ದರು.
