ಉದಯವಾಹಿನಿ, ಕೋಲಾರ: ಬಂಗಾರಪೇಟೆ ರಸ್ತೆಯ ಸ್ಯಾನಿಟೋರಿಯಂ ಎದುರಿನಲ್ಲಿರುವ ಜ್ಯೋತಿ ಎಜುಕೇಶನಲ್ ಟ್ರಸ್ಟ್ ಆವರಣದಲ್ಲಿ ಜ್ಯೋತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆ ಹಾಗೂ ಕಚೇರಿ ಉದ್ಘಾಟನಾ ಸಮಾರಂಭವನ್ನು ಮಾ, ೨೨ರ ಶನಿವಾರ ಬೆಳಗ್ಗೆ ೧೦ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜ್ಯೋತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಜಿ.ಮದುಸೂಧನ್ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಎಂ. ಮಲ್ಲೇಶ್ ಬಾಬು, ಶಾಸಕ ಕೊತ್ತೂರು ಜಿ. ಮಂಜುನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ವಿಧಾನಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು, ಎಂ.ಎಲ್. ಅನಿಲ್‌ಕುಮಾರ್, ನಗರಸಭೆ ಅಧ್ಯಕ್ಷೆ ಕೆ.ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ವಿ.ಸಂಗೀತ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಸಹಕಾರ ಸಂಘಗಳ ಜಂಟಿ ನಿಬಂಧಕ ಜಿ.ಉಮೇಶ್, ಸಹಕಾರ ಸಂಘಗಳ ಉಪ ನಿಬಂಧಕ ಕಿಶೋರ್ ಕುಮಾರ್ ಜೋಶಿ, ಎಂ.ಪಿ.ಮಂಜುನಾಥ್, ಸಹಾಯಕ ನಿಬಂಧಕ ನವೀನ್ ಎನ್, ಜ್ಯೋತಿ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಎಂ.ಆರ್.ಗೋಪಾಲಕೃಷ್ಣ, ಉಪಾಧ್ಯಕ್ಷ ವಿ.ಸತೀಶ್ ಮೂರ್ತಿ ಉಪಸ್ಥಿತರಿರುವರು.
