ಉದಯವಾಹಿನಿ, ಮಾಲೂರು: ತಾಲ್ಲೂಕಿನಲ್ಲಿ ೨೦೨೫-೨೬ ನೇ ಸಾಲಿನ ಎಸ್ಸೆಸ್ಸೆಲ್ಸಿಸಿ ಪರೀಕ್ಷೆಯಲ್ಲಿ ಈ ಬಾರಿ ೯೦ ಪ್ರೌಢಶಾಲೆಗಳಿಂದ ೧೫೯೬ ಬಾಲಕರು ೧೫೫೩ ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು ೩೧೪೯ ವಿದ್ಯಾರ್ಥಿಗಳು ಮಾರ್ಚ್೨೧ರ ಶುಕ್ರವಾರದಿಂದ ಪರೀಕ್ಷೇ ಬರೆಯಲು ಸನ್ನದ್ಧರಾಗಿದ್ದಾರೆ, ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆಯನ್ನು ಎದುರಿಸುವಂತಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಲಾ ತಿಳಿಸಿದರು.
ಪಟ್ಟಣದ ಬಿಇಓ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತು ಕೊಳ್ಳಬೇಕಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಸಾರಿಗೆ ಸೇರಿದಂತೆ ಇನ್ನಿತರ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ. ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಎದುರಾಗದಂತೆ ಕಳೆದ ವರ್ಷದಂತೆ ವೆಬ್ ಕಾಸ್ಟಿಂಗ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಪ್ರತಿ ಕೊಠಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ನಿಗಾ ವಹಿಸಬೇಕಾಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಪರೀಕ್ಷೆಯು ಮಾರ್ಚ್ ೨೧ ರಿಂದ ಏಪ್ರಿಲ್ ೪ ರವರೆಗೆ ನಡೆಯಲಿದ್ದು, ಪ್ರತಿಪರೀಕ್ಷಾ ಕೇಂದ್ರದಲ್ಲಿ ನಕಲನ್ನು ತಡೆಯಲು ಇಲಾಖೆಯವತಿಯಿಂದ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ವಿವಿಧ ಸ್ಥರದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಫಲಿತಾಂಶ ಪಡೆಯಬೇಕಾಗಿದೆ ಎಂದು ಹೇಳಿದರು.ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೧೫೯೬ ಹೆಣ್ಣು ಮತ್ತು ೧೫೫೩ ಗಂಡು ಸೇರಿದಂತೆ ಒಟ್ಟು ೩೧೪೯ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿ ಅಭ್ಯರ್ಥಿಗಳು, ಖಾಸಗೀ ಅಭ್ಯರ್ಥಿಗಳು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ಪಟ್ಟಣದಲ್ಲಿ ಕೆಎಲ್‌ಇ, ಬಿಜಿಎಸ್, ಜೆಎಸ್‌ಎಸ್ ಪ್ರೌಢಶಾಲೆ, ಸರ್ಕಾರಿ ಬಾಲಕರ ಪ್ರೌಢಶಾಲೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಸೇರಿದಂತೆ ೫ ಮತ್ತು ಗ್ರಾಮೀಣ ಭಾಗದಲ್ಲಿ ಟೇಕಲ್, ಮಾಸ್ತಿ, ಲಕ್ಕೂರು ೩ ಸೇರಿದಂತೆ ಒಟ್ಟು ೮ ಪರೀಕ್ಷಾ ಕೇಂದ್ರಗಳು ಹಾಗೂ ೧೮೦ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಅಧೀಕ್ಷಕರು ಉಪ ಅಧೀಕ್ಷಕರು ಕಸ್ಟೋಡಿಯನ್ ಕೊಠಡಿ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ,
