ಉದಯವಾಹಿನಿ, ರಾಯಚೂರು: ಮಹಾರಾಷ್ಟ್ರದಲ್ಲಿ ಕನ್ನಡಿಗರ ವಿರುದ್ಧ ನಡೆಯುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆ ಕರೆ ನೀಡಿದ ಕರ್ನಾಟಕ ಬಂದ್‌ಗೆ ರಾಯಚೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಕೇಂದ್ರ ಭಾಗದಲ್ಲಿರುವ ಉಸ್ಮಾನಿಯಾ ಸಗಟು ತರಕಾರಿ ಮಾರುಕಟ್ಟೆ ಬಂದ್ ಮಾಡಲಾಗಿದೆ.
ಮಾರುಕಟ್ಟೆ ಪ್ರದೇಶದಲ್ಲಿರುವ ಕೆಲ ಅಂಗಡಿಗಳು ಮಾತ್ರ ತೆರೆದುಕೊಂಡಿವೆ. ಪ್ರಾಥಮಿಕ ಶಾಲೆಗಳ ಪರೀಕ್ಷೆಗಳು ಮುಗಿದಿರುವ ಕಾರಣ ಮಕ್ಕಳು ಶಾಲೆಗೆ ಬಂದಿಲ್ಲ.
ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಎಂದಿನಂತೆ ಇದೆ. ಬಸ್ ಸಂಚಾರವೂ ಸಹಜವಾಗಿದೆ. ಆಯ ಕಟ್ಟಿನ ಪ್ರದೇಶದಲ್ಲಿ ಪೊಲೀಸರು
ಬಂದೋಬಸ್ತನಲ್ಲಿ ನಿರತರಾಗಿದ್ದಾರೆ.
