ಉದಯವಾಹಿನಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸಂವಿಧಾನವನ್ನು ಗೌರವಿಸಬೇಕು ಸಂವಿಧಾನದ ಮೂಲಕ ನಮ್ಮ ಹಕ್ಕನ್ನು ಪಡೆಯಬೇಕೆಂದು ಸಂವಿಧಾನದ ರಕ್ಷಣೆಗೆ ಇಡೀ ರಾಜ್ಯ ವ್ಯಾಪ್ತಿ ಹೋರಾಟ ನಡೆಸುತ್ತಿದ್ದಾರೆ ಹಾಗೂ ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ, ಆದರೆ ಬಿಜೆಪಿಗರು ಅವರು ನೀಡಿರುವ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುವ ಹಿನ್ನೆಲೆಯಲ್ಲಿ ಸಂವಿಧಾನವನ್ನು ಡಿ.ಕೆ.ಶಿವಕುಮಾರ್ ಅವರು ಬದಲಾಯಿಸುವ ಹೇಳಿಕೆ ಸುಳ್ಳು ಆದರೆ ಬಿಜೆಪಿಗರು ಸುಳ್ಳು ಸುದ್ದಿಯನ್ನು ಹರಡಿಸುತ್ತಿದ್ದಾರೆ, ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್‌ರವರು ತಿಳಿಸಿದರು.
ನಗರದ ಗಾಂಧಿ ಪ್ರತಿಮೆ ಮುಂಭಾಗ ಇಂದು ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಮೂಲಕ ಸಂವಿಧಾನಕ್ಕೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಇವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮಾನ್ಯ ಲೋಕಸಭಾ ಸ್ಪೀಕರ್ ಅವರಿಗೆ ಈ ಮೂಲಕ ಒತ್ತಾಯ ಪಡಿಸಲಾಗುತ್ತಿದೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ದಿನನಿತ್ಯ ಸ್ಮರಿಸುವ ಕಾಂಗ್ರೆಸ್ಸಿಗರು ಎಂದಿಗೂ ಸಹ ಸಂವಿಧಾನವನ್ನು ವಿರೋಧಿಸುವ ಮಾತನ್ನು ಆಡುವುದಿಲ್ಲ, ಆದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹೆಸರನ್ನು ಹೇಳುವುದು ಒಂದು ವಾಡಿಕೆ ಆಗಿದೆ ಎಂಬುವ ಹೇಳಿಕೆಯನ್ನು ಗೃಹ ಸಚಿವ ಅಮಿತ್ ಷಾ ನೀಡಿದ್ದನ್ನ ಮರೆಮಾಚಲು ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ನಿಜವಾದ ದೇಶದ್ರೋಹದ ಹೇಳಿಕೆಗಳನ್ನು ಬಿಜೆಪಿ ನಾಯಕರು ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!