ಉದಯವಾಹಿನಿ, ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಎಲೆಕ್ಟ್ರೀಕ್ ಬಸ್‍ಗಳ ಕಾರ್ಯಾಚರಣೆ ಇರುವುದಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು, ವಿಧಾನ ಮಂಡಲದ ಅಧಿವೇಶನದಲ್ಲಿ ಪರಿಷತ್ತಿನ ಸದಸ್ಯರಾದ ಬಿ.ಜಿ.ಪಾಟೀಲ ಅವರು ಕೇಳಿದ ಪ್ರಶ್ನೆಗೆ ಈ ಮೇಲಿನಂತೆ ಉತ್ತರಿಸಿದರು.
ಕೇಂದ್ರ ಸರ್ಕಾರದ ಪಿಎಂ ಇ-ಡ್ರೆವ್ ಯೋಜನೆಯಡಿ ಹವಾನಿಯಂತ್ರಣ ರಹಿತ ಅಂತರ್ ನಗರ ಸಾರಿಗೆ ಸೇವೆ ಕಾರ್ಯಾಚರಣೆಗೊಳಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ ಸಚಿವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಯಾವುದೇ ಎಲೆಕ್ಟ್ರೀಕ್ ವಾಹಗನ ಸೇವೆ ಮತ್ತು ಚಾರ್ಜಿಂಗ್ ವ್ಯವಸ್ಥೆ ಇರುವುದಿಲ್ಲ ಎಂದು ಪಾಟೀಲರ ಲಿಖಿತ ಪ್ರಶ್ನೆಗೆ ಸಚಿವರು ನಿಡಿದ್ದಾರೆ.
