ಉದಯವಾಹಿನಿ, ಕೋಲಾರ: ಮುಸಲ್ಮಾನರ ಪವಿತ್ರ ರಂಜಾನ್ ಹಬ್ಬವನ್ನು.ನಗರದ ಕ್ಲಾರ್ಕ್ ಟವರ್ ಈದ್ಗಾ ಮೈದಾನ ಹಾಗೂ ಚಿಕ್ಕಬಳ್ಳಾಪುರ ರಸ್ತೆಯ ಸಂಗೊಂಡಹಳ್ಳಿ ಬಳಿಯ ದರ್ಗಾ ಸಮೀಪ ಆಯೋಜಿಸಿದ್ದ ವಿಶೇಷ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು.

ಹಬ್ಬದ ಹಿನ್ನೆಲೆಯಲ್ಲಿಕಳೆದ ಒಂದು ವಾರದಿಂದಲೂ ಸಿದ್ಧತೆಗಳು ಜೋರಾಗಿ ನಡೆದಿದ್ದವು. ದರ್ಗಾಗಳಿಗೆ ವಿಶೇಷವಾಗಿ ದೀಪಾಲಂಕಾರಗಳನ್ನು ಮಾಡಲಾಗಿತ್ತು. ಹೊಸ ಬಟ್ಟೆಗಳನ್ನು ತೊಟ್ಟು ಕುಟುಂಬ ಸಮೇತರಾಗಿ ಪ್ರಾರ್ಥನೆಗಳಿಗೆ ಆಗಮಿಸಿದ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಣೆಯಲ್ಲಿ ತೊಡಗಿದರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಪ್ರಾರ್ಥನೆಯಲ್ಲಿ ಉತ್ತಮ ಮಳೆ, ಬೆಳೆಗಾಗಿ ಅಲ್ಲಾಹುವಿನಲ್ಲಿ ಬೇಡಿಕೊಳ್ಳಲಾಯಿತು ಪ್ರಾರ್ಥನೆ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದುದು ಸಾಮಾನ್ಯವಾಗಿತ್ತು ಬಡವರಿಗೆ ಹಣ ಸೇರಿದಂತೆ ಇನ್ನಿತರೆ ವಸ್ತುಗಳನ್ನು ದಾನವಾಗಿ ನೀಡಲಾಯಿತು.

Leave a Reply

Your email address will not be published. Required fields are marked *

error: Content is protected !!