ಉದಯವಾಹಿನಿ, ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಮಧ್ಯಾಹ್ನ ಧಾರಾಕಾರ ಮಳೆ ಸುರಿದಿದೆ.ಬೆಳಿಗ್ಗೆಯಿಂದಲೇ ತಾಲ್ಲೂಕಿನ ಹಲವೆಡೆ ತುಂತುರು ಮಳೆ ಸುರಿಯಿತು.
ಮಧ್ಯಾಹ್ನ ಸಕಲೇಶಪುರ ಪಟ್ಟಣದಲ್ಲಿ ಜೋರಾದ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನೀರು ಹರಿದಿದ್ದು, ವಾಹನ ಸವಾರರು ಪರದಾಡುವಂತಾಯಿತು.
ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೆಹಳ್ಳಿ ಹಾಗೂ ಹಿರೀಸಾವೆಯಲ್ಲೂ ತುಂತುರು ಮಳೆಯಾಗಿದೆ.
