ಉದಯವಾಹಿನಿ, ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆರಾಯನ ಆಗಮನ ಆಗಲಿದೆ.ಮುಂದಿನ ೬ ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದಿನಿಂದ ಏಪ್ರಿಲ್ ೯ ರವರೆಗೆ ಎಲ್ಲೆಲ್ಲಿ ಮಳೆ ಬೀಳಲಿದೆ ಎಂಬುದರ ಕುರಿತು ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ವ್ಯಾಪಕ ಹಗುರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಎರಡು ಕರಾವಳಿ ಜಿಲ್ಲೆಗಳ ಹಲವೆಡೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗಲಿದೆ.
ವಿಜಯಪುರ, ಕಲಬುರಗಿ, ಯಾದಗಿರಿ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಹಾಸನ, ಮೈಸೂರು, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ / ಗುಡುಗು ಸಹಿತ ಮಳೆಯಾಗಲಿದೆ.
ಏಪ್ರಿಲ್ ೬ ರ ಮಳೆಯ ಮುನ್ಸೂಚನೆ ಹೀಗಿದೆ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ.ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಒಳಭಾಗದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆಯಿದೆ.
