ಉದಯವಾಹಿನಿ, ಬೆಂಗಳೂರು : ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸಲು ರಾಜ್ಯ ಸರಕಾರ ಮುಂದಾಗಿರುವುದು ಹಾಸ್ಯಾಸ್ಪದ, ಹೊರ ರಾಜ್ಯದಿಂದ ಅಕ್ಕಿ ಖರೀದಿಸುವುದು ಕಮಿಷನ್ ಪಡೆಯುವ ಹುನ್ನಾರ ಎಂದು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು.ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ನಮ್ಮ ರಾಜ್ಯದಲ್ಲಿ ಅಕ್ಕಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ.ಇಲ್ಲಿಂದಲೇ ಖರೀದಿ ಮಾಡಿದರೆ ರೈತರಿಗೆ ಅನುಕೂಲವಲ್ಲವೇ? ಛತ್ತೀಸಗಡ, ತೆಲಂಗಾಣದಿಂದ ತರುವುದರ ಹಿಂದೆ ಕಮಿಷನ್ ಗಿಟ್ಟಿಸುವ ಹುನ್ನಾರ ಇದೆ ಆರೋಪಿಸಿದರು.ಕಾಂಗ್ರೆಸ್ ಪಕ್ಷವು ತಾವು ಕೊಟ್ಟ ಭರವಸೆ, ಗ್ಯಾರಂಟಿ ಅನುಷ್ಠಾನ ಅಸಾಧ್ಯವಾದ ಸಂದರ್ಭದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂತೆಗೆತ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂದಕ್ಕೆ ಪಡೆಯುವುದು ಹಾಗೂ ಪಠ್ಯಪುಸ್ತಕ ಪರಿಷ್ಕರಣೆಯಂಥ ನಿರ್ಧಾರಗಳನ್ನು ಮಾಡುತ್ತಿದೆ. ಈ ಮೂಲಕ ಜನರ ಗಮನ ಬೇರೆಡೆ ಸೆಳೆಯಲು ಮುಂದಾಗಿದೆ. ಅಲ್ಲದೆ, ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸಲು ಹೊರಟಿದೆ ಎಂದು ಕಿಡಿಕಾರಿದರು.
