ಉದಯವಾಹಿನಿ, ನಂಜನಗೂಡು: ನಂಜುಂಡೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಗೌತಮ ಪಂಚ ಮಹಾ ರಥೋತ್ಸವಕ್ಕೆ ಸಿದ್ಧತೆ ಕಾರ್ಯ ಬರದಿಂದ ಸಾಗಿದೆ. ಏ.9ರ ವೇಳೆಗೆ.5.ರಿಂದ 5.40 ಒಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಗೌತಮ ರಥಾ ರೋಹಣ ನೆರೆವೇರಿಯಲ್ಲಿದ್ದು ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪೆÇ್ಪೀತ್ಸವ ಏಪ್ರಿಲ್ 11ರ ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದ್ದು ಈ ವೇಳೆಯೂ ಸಾವಿರಾರು ಜನರು ಭಾಗಿಯಾಗಲಿದ್ದಾರೆ.ಗೌತಮ ರಥದ ಆಕರ್ಷಣೆ ರಥೋತ್ಸವದಲ್ಲಿ ಗಣಪತಿ ಸುಬ್ರಹ್ಮಣ್ಯ ಚಂಡಿಕೇಶ್ವರ ಪಾರ್ವತಿ ಹಾಗೂ ಶ್ರೀಕಂಠೇಶ್ವರ ಸ್ವಾಮಿ ಅವರು ಆಸೀನರಾಗಿರುವ ಐದು ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರ ಸ್ವಾಮಿ ಆಸೀನರಾಗಿರುವ ಗೌತಮ ರಥ ಐತಿಹಾಸಿಕ ಹಿನ್ನೆಲೆ ಹೊಂದಿದ್ದು ಸುಮಾರು 10 ಅಡಿ ವ್ಯಾಸದ ಆರು ಬೃಹತ್ ಚಕ್ರಗಳನ್ನು ಒಳಗೊಂಡಿದೆ ನೆಲದಿಂದ ಸುಮಾರು 90 ಅಡಿ ಎತ್ತರದ ಬೃಹತ್ ರಥ 110 ಟನ್ ತೂಕ ಹೊಂದಿದೆ ಗೌತಮ ರಥದ ಉತ್ಸವ ಮಂಟಪ ವಿಶಿಷ್ಟ ಕಾಲ ಕೆತ್ತನೆಯಿಂದ ಕೂಡಿದೆ ಜಾತ್ರೆ ಸಂದರ್ಭ ನಾನಾ ಬಣ್ಣಗಳ ವಸ್ತ್ರಗಳು ವಿವಿಧ ಬಗೆಯ ಪುಷ್ಪಗಳು ಹಾಗೂ ಬಣ್ಣದ ಧ್ವಜಗಳನ್ನು ರಥಗಳಿಗೆ ಕಟ್ಟಿ ಸಿಂಗರಿಸಲಾಗುತ್ತದೆ 1.5 ಞ.m ಉದ್ದದ ರಸ ಬೀದಿಯಲ್ಲಿ ಒಂದು ಸುತ್ತು ಐದು ರಥಗಳನ್ನು ಎಳೆಯುವ ಮೂಲಕ ಭಕ್ತಾದಿಗಳು ಸಂಭ್ರಮಿಸುತ್ತಾರೆ.ಇನ್ನು ಜಾತ್ರೆಗೆ ಲಕ್ಷಕ್ಕೂ ಹೆಚ್ಚು ಸಂಕೆಯ ಭಕ್ತರು ಆಗಮಯಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆ ಜರಗದಂತೆ ಪೆÇಲೀಸ್ ಇಲಾಖೆ ಬಿಗಿ ಬಂದು ಬಸ್ ಕಲ್ಪಿಸಲಿದೆ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ ದೇವಾಲಯದ ಆವರಣ ದಾಸೋಹ ಭವನ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ಪೂರ್ಣಗೊಂಡಿದೆ ಜನನಿ ಬೀಡ ಪ್ರದೇಶಗಳಲ್ಲಿ ಪೆÇಲೀಸ್ ವಾಚ್ ಟವರ್ ಗಳನ್ನು ನಿರ್ಮಿಸಲಾಗಿದೆ ಉಳಿದಂತೆ ಜಾತ್ರೆಯ ಸಲುವಾಗಿ ಆಗಮಿಸುವ ಭಕ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು ಮೈಸೂರ್ ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬರುವ ಭಕ್ತಾದಿಗಳಿಗೆ ಹೆಚ್ಚಿನ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು ಶೌಚಾಲಯದ ವ್ಯವಸ್ಥೆ ಸಾರಿಗೆ ಸೌಲಭ್ಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಅಲ್ಲದೆ ಸರ್ಕಾರಿ ಬಸ್ ನಿಲ್ದಾಣ ಖಾಸಗಿ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳ ಹಾಗೂ ದೇವಾಲಯದ ಸುತ್ತಲೂ ಪೆÇಲೀಸರು ಕಟ್ಟೆಚ್ಚರ ವಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!