ಉದಯವಾಹಿನಿ, ಬೆಂಗಳೂರು : ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಶ್ವತ ಬಣ್ಣ ಬಣ್ಣಗಳ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಗೆ ಚಾಲನೆ ನೀಡಿದರು.
ಇದೀಗೆ ಪ್ರವಾಸೋದ್ಯಮ ಹೆಸರಿನಲ್ಲಿ ವಿಧಾನಸೌಧಕ್ಕೆ ಪ್ರವೇಶಿಸುವವರಿಗೆ ಶುಲ್ಕವನ್ನು ವಿಧಿಸಲು ಸರ್ಕಾರ ನಿರ್ಧರಿಸಿದೆ.
ವಿಧಾನಸೌಧ ವೀಕ್ಷಣೆಗೆ ಗ್ರೇಡೆಡ್ ಟೂರ್ ವ್ಯವಸ್ಥೆ ಜಾರಿಗೆ ತೀರ್ಮಾನಿಸಿರುವ ಸರ್ಕಾರ, ಪ್ರವಾಸಿ ತಾಣವಾಗಿ ಮಾಡಲು ಮುಂದಾಗಿದೆ. ಪ್ರವಾಸೋಧ್ಯಮ ಇಲಾಖೆಯಿಂದ ಗೋಡೆಡ್ ಟೂರ್ ಮಾಡಲು ಅವಕಾಶ ಕೋರಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಷರತ್ತು ಬದ್ಧವಾಗಿ ಸರ್ಕಾರ ಅನುಮತಿ ನೀಡಿದೆ. ಪ್ರವೇಶ ಶುಲ್ಕ ನೀಡಿ ಒಳಗೆ ಬರಲು ಆದೇಶವನ್ನೂ ಮಾಡಿರುವ ಸರ್ಕಾರ, ಸದ್ಯ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುವುದನ್ನು ನಿರ್ಧರಿಸಿಲ್ಲ.
