ಉದಯವಾಹಿನಿ.,ಚಿಕ್ಕಮಗಳೂರು: ಸೀತಾಳಯ್ಯನಗಿರಿಯಿಂದ ಮುಳ್ಳಯ್ಯನಗಿರಿ ತನಕ ಕಾಂಕ್ರಿಟ್ ರಸ್ತೆ ಮತ್ತು ಮೋರಿ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಎರಡು ತಿಂಗಳ ಕಾಲ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ‘ಕಿರಿದಾದ ರಸ್ತೆಯಲ್ಲಿ ಪ್ರವಾಸಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು ರಸ್ತೆಯನ್ನು ಅಗಲಗೊಳಿಸುವುದು ಅವಶ್ಯವಾಗಿದೆ ಎಂದು ಉಪ ವಿಭಾಗಾಧಿಕಾರಿ ವರದಿ ಸಲ್ಲಿಸಿದ್ದಾರೆ.
ಹಾಗಾಗಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಾಹನ ಸಂಚಾರ ಸಾಧ್ಯವಿಲ್ಲದ ಕಾರಣ ನಿಷೇಧಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
