ಉದಯವಾಹಿನಿ, ಮಾಲೂರು: ಪಟ್ಟಣದ ಮುಖ್ಯ ರಸ್ತೆಯ ಬಿಇಓ ಕಚೇರಿಯ ಬಳಿ ಇರುವ ಟ್ರಾನ್ಸ್ ಫಾರ್ಮರ್‌ನಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ವಿದ್ಯುತ್ ಸ್ಥಗಿತಗೊಳಿಸಿ ತಕ್ಷಣ ಸ್ಥಳಕ್ಕೆ ಧಾವಿಸಿ ಟ್ರಾನ್ಸ್‌ಫಾರಂ ಗಳನ್ನು ದುರಸ್ತಿ ಪಡಿಸುವ ಕೆಲಸ ಮಾಡುವುದರ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಡೆದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಬೆಸ್ಕಾಂ ಕಾರ್ಯಪಾಲಕ ಅಭಿಯಂತರ ಆನ್ಸರ್ ಭಾ? ಅವರು ಇಲ್ಲಿನ ಟ್ರಾನ್ಸ್‌ಫಾರಂನಲ್ಲಿ ಜಂಪ್ ಕಟ್ಟಾಗಿ ಟ್ರಾನ್ಸ್‌ಪಾರಂ ಒಳಗಿನ ಆಯಿಲ್ ಸೋರಿಕೆಯಾದ ಕಾರಣ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣ ವಿದ್ಯುತ್ತು ಸ್ಥಗಿತಗೊಳಿಸಿ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಟ್ರಾನ್ಸ್‌ಫಾರಂ ಅನ್ನು ದುರಸ್ತಿಪಡಿಸಿ ವಿದ್ಯುತ್ ಸರಬರಾಜು ಮಾಡಲಾಗಿದೆ ಎಂದು ಹೇಳಿದ್ದಾರೆ.
ಪೋಟೊ ೪ ಮಾಲೂರು ಪಟ್ಟಣದ ಮುಖ್ಯ ರಸ್ತೆಯ ಬಿಇಓ ಕಚೇರಿಯ ಬಳಿ ಇರುವ ಟ್ರಾನ್ಸ್ ಫಾರ್ಮರ್‌ನಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ವಿದ್ಯುತ್ ಸ್ಥಗಿತಗೊಳಿಸಿ ತಕ್ಷಣ ಸ್ಥಳಕ್ಕೆ ಧಾವಿಸಿ ಟ್ರಾನ್ಸ್‌ಫಾರಂ ಗಳನ್ನು ದುರಸ್ತಿ ಪಡಿಸುವ ಕೆಲಸ ಮಾಡುವುದರ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಡೆದಿದ್ದಾರೆ.
