ಉದಯವಾಹಿನಿ, ನವದೆಹಲಿ : ಅಮೆರಿಕದಿಂದ ಭಾರತಕ್ಕೆ ಗಡೀಪಾರಾಗಿರುವ 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಪಾಕಿಸ್ತಾನ ಮೂಲದ ಕುಖ್ಯಾತ ಭಯೋತ್ಪಾದಕ ತಪವೂರ್ ರಾಣಾನ ವಿಚಾರಣೆಗಾಗಿ ವಿಶೇಷ ತನಿಖಾ ನ್ಯಾಯಾಲಯವು 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆ) ಎನ್ ಐಎ) ಕನ್ನಡಿಗೆ ನೀತಿ ಆದೇಶ ನೀಡಿದೆ.ಬಂಧನದ ಬಳಿಕ ತಡರಾತ್ರಿ ಎನ್‌ಐಎ ಜೈಲು ವ್ಯಾನ್, ಮಹೀಂದ್ರಾ, ಮಾರ್ಕ್ಸ್ಮನ್ ಶಸ್ತ್ರಸಜ್ಜಿತ ವಾಹನ ಮತ್ತು ಅಂಬ್ಯುಲೆನ್ಸ್ ಸೇರಿದಂತೆ ಬೆಂಗಾವಲು ಪಡೆಯೊಂದಿಗೆ ರಾಣಾನನ್ನು ಬಿಗಿ ಭದ್ರತೆಯ ನಡುವೆ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಕರೆತರಲಾಯಿತು.
ಈ ವೇಳೆ ಎನ್‌ಐಎ ಪರ ವಕೀಲರು, ಮುಂಬೈ ದಾಳಿಯ ಪಿತೂರಿಗೆ ಸಂಬಂಧಿಸಿದಂತೆ ಉಗ್ರ ಹೆಡ್ಲಿ ಮತ್ತು ರಾಣಾ ನಡುವಿನ ಇಮೇಲ್ ಪುರಾವೆಗಳನ್ನು ಉಲ್ಲೇಖಿಸಿದರು. ಕ್ರಿಮಿನಲ್ ಪಿತೂರಿಯ ಭಾಗವಾಗಿ ಡೇವಿಡ್ ಹೆಡ್ಲಿ ಭಾರತಕ್ಕೆ ಭೇಟಿ ನೀಡುವ ಮೊದಲು ತಪವೂರ್ ರಾಣಾನ ಜೊತೆ ಸಂಪೂರ್ಣ ಕಾರ್ಯಾಚರಣೆಯ ಬಗ್ಗೆ ಚರ್ಚಿಸಿದ್ದ. ಹೀಗಾಗಿ ಆತನನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಈ ವಾದವನ್ನು ಪುರಸ್ಕರಿಸಿದ ವಿಶೇಷ ಎನ್‌ಐಎ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರ ಮುಂದೆ ಹಾಜರುಪಡಿಸಿದಾಗ ರಾಣಾನ ಕಸ್ಟಡಿಗೆ ಅನುಮತಿ ನೀಡಿದರು.
ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ನಡೆಸುವುದು, ಕೊಲೆ ಮತ್ತು ನಕಲಿ ದಾಖಲೆ ಮತ್ತು ಕಾನೂನುಬಾಹಿರ ಚಟುವಟುಕೆಗಳ ಕಾಯ್ದೆಯಡಿ ರಾಣಾ ಮೇಲೆ ಆರೋಪ ಹೊರಿಸಲಾಗಿದೆ. 64 ವರ್ಷದ ತಹವೂರ್ ರಾಣಾನನ್ನು ವಿಚಾರಣೆ ಎದುರಿಸಲು ಮುಂಬೈಗೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ.
ಹಿರಿಯ ವಕೀಲ ದಯಾನ್ ಕೃಷ್ಣನ್ ಮತ್ತು ವಿಶೇಷ ಸಾರ್ವಜನಿಕ ಅಭಿಯೋಜಕ ನರೇಂದರ್ ಮಾನ್ ಎನ್‌ಐಎ ಪರ ವಾದಿಸಿದರು. ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲ ಪಿಪೀಯೂಷ್ ಸಚ್ವ ತಹವೂರ್ ರಾಣಾ ಪರ ವಾದಿಸಿದರು.
ಇಮೇಲ್ ಸಂವಹನಗಳಂತಹ ಪ್ರಮುಖ ಪುರಾವೆಗಳನ್ನು ಉಲ್ಲೇಖಿಸಿ ಎನ್‌ಐಎ ಆರಂಭದಲ್ಲಿ ರಾಣಾನನ್ನು 20 ದಿನಗಳ ಕಸ್ಟಡಿಗೆ ಕೋರಿತ್ತು ಎಂದು ಮೂಲಗಳು ತಿಳಿಸಿವೆ. ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ಸಲ್ಲಿಕೆಯಲ್ಲಿ, ಶಂಕಿತ ಪಿತೂರಿಯನ್ನು ತನಿಖೆ ಮಾಡಲು ರಾಣಾನ ಕಸ್ಟಡಿ ವಿಚಾರಣೆ ಅತ್ಯಗತ್ಯ ಎಂದು ಎನ್‌ಐಎ ವಾದಿಸಿತು. ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಿಮಿನಲ್ ಸಂಚಿನಲ್ಲಿ ರಾಣಾ ಇತರರೊಂದಿಗೆ ಸಹಕರಿಸಿದ್ದಾನೆ. ಎಂದು ಅದು ಆರೋಪಿಸಿದೆ.
