ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಮ್ಮೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಸ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದು, ಸೇನೆ ನಡೆಸಿದ ಕಾರ್ಯಾಚಾರಣೆಯಲ್ಲಿ ಮೂವರು ಉಗ್ರರನ್ನು ಸೆದೆಬಡಿಯಲಾಗಿದೆ.ಹುತಾತ್ಮ ಸೇನಾಧಿಕಾರಿಯನ್ನು ಕುಲದೀಪ್ ಚಂದ್ ಎಂದು ಗುರ್ತಿಸಲಾಗಿದೆ. ಇನ್ನು ಹತರಾದ ಉಗ್ರರ ಪೈಕಿ ಓರ್ವ ಜೈಶ್-ಎ-ಮೊಹಮ್ಮದ್ ನ ಕಮಾಂಡರ್ ಸೈಫುಲ್ಲಾ ಎಂದು ಗುರುತಿಸಲಾಗಿದೆ.
ಈತ ಹಲವಾರು ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದನು. ಸೈಫುಲ್ಲಾ ಜೈಶ್-ಎ-ಮೊಹಮ್ಮದ್ ಕಮಾಂಡರ್ ಆಗಿದ್ದು, ಕಿತ್ ವಾರ್ ಪ್ರದೇಶದಲ್ಲಿ ಈತ ಉಗ್ರ ಸಂಘಟನೆಯನ್ನು ಮುನ್ನಡೆಸುತ್ತಿದ್ದ, ಈತನ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ತಿಳಿದು ಕಾರ್ಯಾಚರಣೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರತಿಕೂಲ ಭೂಪ್ರದೇಶ ಮತ್ತು ಪ್ರತಿಕೂಲ ಹವಾಮಾನದ ಹೊರತಾಗಿಯೂ. ನಮ್ಮ ಕೆಚ್ಚೆದೆಯ ಸೈನಿಕರು ನಿರಂತರ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದಾರೆ ಎಂದು ಅದು ಹೇಳಿದೆ. ಹೆಚ್ಚಿನ ಹಿಮಪಾತವಿರುವ ಪ್ರದೇಶಗಳಲ್ಲಿ ಮತ್ತು ಕಠಿಣ ಭೂಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ವಿಶೇಷ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಡಾ ಜಿಲ್ಲೆಯ ಭದೇವಾರ್ ಪ್ರದೇಶಕ್ಕೂ ಶೋಧ ಕಾರ್ಯಾಚರಣೆ ವಿಸ್ತರಿಸಲಾಗಿದೆ. ಜಮ್ಮು ಪ್ರದೇಶದ ವಿವಿಧ ಗುಡ್ಡಗಾಡು ಪ್ರದೇಶಗಳ ನಡುವಿನ ಭಯೋತ್ಪಾದಕರ ಚಲನವಲನಗಳ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಿಶ್ವವಾರ್ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಯಾವುದೇ ಯೋಧರಿಗೆ ಗಾಯವಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ. ಕೆಲ ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರನ್ನು ಬೇಟೆಯಾಡುವ ಕಾರ್ಯ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!