ಉದಯವಾಹಿನಿ, ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಠಾನ ಮಾಡದೆ ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡು ಪುಟಗಳ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ ಅವರು, ಕಾಂತರಾಜು ಆಯೋಗದ ಮೇಲುಸ್ತುವಾರಿಯಲ್ಲಿ ಸಿದ್ಧಪಡಿಸಲಾದ ಕರ್ನಾಟಕ ಜಾತಿ ಗಣತಿ ವರದಿಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ವರದಿಯು ಮೂಲಭೂತವಾಗಿ ದೋಷಪೂರಿತವಾಗಿದೆ ಮತ್ತು ರಾಜ್ಯದ ಜನಸಂಖ್ಯಾ ವಾಸ್ತವತೆಯನ್ನು ಪ್ರತಿಬಿಂಬಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಆಯೋಗದ ಪ್ರಕಾರ, ಸಮೀಕ್ಷೆಯನ್ನು ಏಪ್ರಿಲ್‌ 11, 2015 ಮತ್ತು ಮೇ 30, 2015 ರ ನಡುವೆ 5.9 ಕೋಟಿ ಜನಸಂಖ್ಯೆಯನ್ನು ಒಳಗೊಳ್ಳಲು ಕೇವಲ 50 ದಿನಗಳ ಅಲ್ಪಾವಧಿಯಲ್ಲಿ ನಡೆಸಲಾಗಿದೆ. ಇದು ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ಸಂಪೂರ್ಣತೆಯ ಮೇಲೆ ಗಂಭೀರ ಅನುಮಾನವನ್ನು ಉಂಟುಮಾಡುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!