ಉದಯವಾಹಿನಿ, ಜೈಪುರ: ರಾಜಸ್ಥಾನದ ಸಿಕಾರ್ ಜಿಲ್ಲೆಯ 19 ವರ್ಷದ ದಲಿತ ಯುವಕನೊಬ್ಬ, ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿ, ಮೂತ್ರ ವಿಸರ್ಜಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಏಪ್ರಿಲ್ 8 ರಂದು ಸಿಕಾರ್‌ನ ಫತೇಪುರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಆದರೆ ಯುವಕನ ಕುಟುಂಬ ದೂರು ನೀಡಿದ ನಂತರ ಏಪ್ರಿಲ್ 16 ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. “ಈ ವಿಷಯದಲ್ಲಿ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಮತ್ತು ಅವರ ಹೇಳಿಕೆಯನ್ನು ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ(ಡಿಎಸ್‌ಪಿ) ಅರವಿಂದ್ ಕುಮಾರ್ ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ದೂರಿನ ಪ್ರಕಾರ, ಏಪ್ರಿಲ್ 8 ರಂದು ತನ್ನ ಗ್ರಾಮದಲ್ಲಿ ಮದುವೆ ಮೆರವಣಿಗೆ ವೀಕ್ಷಿಸಲು ಯುವಕ ಹೊರಬಂದಾಗ, ಇಬ್ಬರು ಆರೋಪಿಗಳು ಕೆಲಸದ ನೆಪದಲ್ಲಿ ಆತನನ್ನು ಬಸ್ ನಿಲ್ದಾಣಕ್ಕೆ ಕರೆದಿದ್ದಾರೆ.
ನಂತರ ಇಬ್ಬರೂ ಯುವಕನನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಆತನ ಖಾಸಗಿ ಭಾಗಗಳು ಸೇರಿದಂತೆ ಎಲ್ಲಾ ಭಾಗಗಳಿಗೆ ಹೊಡೆದಿದ್ದಾರೆ. ಬಲವಂತವಾಗಿ ಬಟ್ಟೆಗಳನ್ನು ಬಿಚ್ಚಿಸಿ ಆತನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!