ಉದಯವಾಹಿನಿ, ಶ್ರೀನಗರ : ಜಮ್ಮು-ಕಾಶ್ಮೀರದ ಅನಂತ್‌ನಾಗ್ನಿನ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು, ಸೌದಿ ಅರೇಬಿಯಾದಿಂದ ಬಂದಿಳಿದಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಭೀಕರ ದಾಳಿಯ ಬಗ್ಗೆ ದೇಶಾದ್ಯಂತ ಆಘಾತ ಮತ್ತು ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಮೋದಿ ಹಿಂದಿರುಗಿದ ತಕ್ಷಣ ಅಧಿಕಾರಿಗಳು ಅವರಿಗೆ ಈ ಕುರಿತು ಮಾಹಿತಿ ನೀಡಿದರು.
ದಕ್ಷಿಣ ಕಾಶ್ಮೀರದ ಪಹಲ್ಲಾಮ್‌ ನಲ್ಲಿರುವ ಪ್ರಮುಖ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ಪ್ರವಾಸಿಗರಾಗಿದ್ದಾರೆ ಮತ್ತು ಹಲವು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಲ್ಲಿ ಯುಎಇ ಮತ್ತು ನೇಪಾಳದ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಅವರು ಹೇಳಿದರು. ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರರು ಕೆಲವರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ ಉಗ್ರರ ದಾಳಿಯನ್ನು ಮೋದಿ ಗಂಭೀರವಾಗಿ ಪರಿಗಣಿಸಿದ್ದಾರೆ.ಹಾಗೆಯೇ ಗೃಹ ಸಚಿವ ಅಮಿತ್ ಶಾ ಶ್ರೀನಗರಕ್ಕೆ ಧಾವಿಸಿ ಭದ್ರತಾ ಕ್ರಮಗಳನ್ನು ಮುನ್ನಡೆಸಿದರು. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಸಿಒಎಎಸ್ ಅಸಿಮ್ ಮುನೀರ್ ಹಿಂದೂಗಳ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ.

Leave a Reply

Your email address will not be published. Required fields are marked *

error: Content is protected !!