ಉದಯವಾಹಿನಿ, ಕೋಲಾರ: ಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಉತ್ತರ ನೀಡಲಿದ್ದು, ಈ ಘಟನೆಯನ್ನು ಇಡೀ ದೇಶದ ಜನತೆ ಪಕ್ಷಭೇದ ಮರೆತು ಖಂಡಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಡೂಂಲೈಟ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಕಾಶ್ಮೀರ ಧಾಳಿಯಲ್ಲಿ ಹುತಾತ್ಮರಾದವರಿಗೆ ಮೇಣದ ಬತ್ತಿ ಬೆಳಗಿ ಶ್ರದ್ದಾಂಜಲಿ ಅರ್ಪಿಸಿದ ನಂತರ ಅವರು ಮಾತನಾಡುತ್ತಿದ್ದರು.
ಘಟನೆಯಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಧಾಳಿ ನಡೆಸಿರುವ ಪಾಪಿ ಉಗ್ರರಿಗೆ ತಕ್ಕ ಶಾಸ್ತಿ ಮಾಡಬೇಕು, ಇಂತಹ ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ತಕ್ಕರಾಜತಾಂತ್ರಿಕ ಉತ್ತರ ನೀಡಿದ್ದು, ಮುಂದೆಯೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.ಈಘಟನೆಗೆ ಕಾರಣರಾದ ನೀಚ ಉಗ್ರಗಾಮಿಗಳನ್ನು ಹುಡುಕಿ ಗುಂಡಿಕ್ಕಿ ಕೊಲ್ಲುವ ಮೂಲಕ ಭಾರತದ ಶಕ್ತಿ ಏನೆಂಬುದನ್ನು ವಿಶ್ವಕ್ಕೆ ತೋರಿಸಬೇಕಾಗಿದೆ ಎಂದ ಅವರು, ಮೋದಿ ನೇತೃತ್ವದಲ್ಲಿ ಇಡೀ ದೇಶವೇ ಹುತಾತ್ಮರಾದವರ ಕುಟುಂಬಗಳ ಜತೆಗಿದೆ ಎಂದರು.
ಇದು ಹಿಂದೂಗಳನ್ನು ದಮನ ಮಾಡುವ ಕೃತ್ಯವಾಗಿದೆ, ಕೇವಲ ಹಿಂದೂಗಳನ್ನೇ ಗುರಿಯಾಗಿಸಿ ಈ ಕೃತ್ಯ ನಡೆದಿರುವ ಕುರಿತು ವರದಿಯಾಗಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದ್ದು, ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರ ನೀಡಿ ಇಂತಹ ದೇಶದ್ರೋಹಿಳನ್ನು ಮಟ್ಟಹಾಕಬೇಕು ಎಂದು ಒತ್ತಾಯಿಸಿದರು.
ಮುಖಂಡ ಅಪ್ಪಿ ನಾರಾಯಣಸ್ವಾಮಿ, ಸಾಮಾ .ಬಾಬು, ಎಬಿವಿಪಿ ಹರೀಶ್, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ, ನಗರ ಒಬಿಸಿ ಮೋರ್ಚಾ ಶ್ರೀನಾಥ್, ಶಂಕರ್, ಮಹೇಶ್ ಮತ್ತಿತರರಿದ್ದರು.
