ಉದಯವಾಹಿನಿ, ಬೆಂಗಳೂರು: ಕೃವಿವಿ, ಜಿ.ಕೆ.ವಿ.ಕೆ ಆವರಣದಲ್ಲಿ ಆಯೋಜಿಸಿದ್ದ “ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ರೈತ ಸಂತೆ” ಕಾರ್ಯಕ್ರಮದ ಉದ್ಘಾಟನೆಯ ನ್ನು ಗೃಹ ಸಚಿವ ಜಿ. ಪರಮೇಶ್ವರ ನೆರವೇರಿಸಿದರು. ಮಾತನಾಡಿದ ಸಚಿವರು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಲಾದ ವಿವಿಧ ತಾಂತ್ರಿಕತೆಗಳ ಉತ್ಪನ್ನ ಕೃಷಿ ಪರಿಕರಗಳನ್ನು ಕೃಷಿಕರಿಗೆ ಹಾಗೂ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜನಪ್ರಿಯಗೊಳಿಸುವ ಸಲುವಾಗಿ “ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ ರೈತ ಸಂತೆ” ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ ಎಂದರು.
ರೈತ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರದ ಪರವಾಗಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸದರಿ ಕೃಷಿ ಸಂತೆಯಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ವಿವಿಧ ಕೃಷಿ ಸಂಶೋಧನಾ, ವಿಸ್ತರಣೆ ಹಾಗೂ ಕೃಷಿ ಮಹಾವಿದ್ಯಾನಿಲಯಗಳಲ್ಲಿ ಉತ್ಪಾದಿಸಲಾದ ಕೃಷಿ ಉತ್ಪನ್ನಗಳು ಹಾಗೂ ಕೃಷಿ ತಂತ್ರಜ್ಞಾನ, ತಾಂತ್ರಿಕತೆಗಳನ್ನು ಪರಿಚಯ ಮಾಡಿಸುವ ನಿಟ್ಟಿನಲ್ಲಿ ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪ ನ್ನಗಳು ಸಾವಯವ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ಧಿ ಸಾಮಗ್ರಿಗಳು (ಪ್ರಮುಖವಾಗಿ ತೋಟಗಾರಿಕಾ ಬೆಳಗಳಾದ ಹಣ್ಣುಗಳು, ಸುಗಂಧ ಮತ್ತು ಔಷಧೀಯ ಸಸ್ಯಗಳು) ಜೈವಿಕ ಗೊಬ್ಬರಗಳು, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣಾ ಜೈವಿಕ ಕೀಟನಾಶಕಗಳು, ಕರಕುಶಲ ವಸ್ತುಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉಪ ಉತ್ಪನ್ನಗಳು, ಅಣಬೆ ಮತ್ತು ಜೇನುಕೃಷಿ, ವಾಣಿಜೀಕರಣ ಉತ್ಪನ್ನಗಳು, ಪಶುಸಂಗೋಪನೆ, ಕೇಕ್ ಪ್ರದರ್ಶನ, ರಾಜಮುಡಿ ಅಕ್ಕಿ, ರಾಸಾಯನಿಕ ಮುಕ್ತ ಬೆಲ್ಲ, ಕೃಷಿ ಪ್ರಕಟಣೆಗಳು ಹಾಗೂ ಇನ್ನೂ ಮುಂತಾದವುಗಳನ್ನು ಈ ಸಂತೆಯನ್ನು ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಆಚ್ಚುಕಟ್ಟಾಗಿ ವ್ಯವಸ್ಥೆಮಾಡಲಾಗಿದೆ ಎಂದರು.
ಪ್ರಸ್ತುತ ದಿನಗಳಲ್ಲಿ ಮೌಲ್ಯವರ್ಧನೆಗೆ ಸಾಕಷ್ಟು ಒತ್ತು ಕೊಟ್ಟಿದ್ದು ವಿವಿಧ ಬೆಳೆಗಳಲ್ಲಿ ಸಿರಿಧಾನ್ಯಗಳಲ್ಲಿನ ಸಮರ್ಥ ಬೆಳೆಗಳಲ್ಲಿ (ಕಿನೋವ, ರಾಜಗೀರ ಇತ್ಯಾದಿ) ಮೌಲ್ಯವರ್ಧಿತ ಪದಾರ್ಥಗಳಿಗೆ ಒತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆ. ಸಾರ್ವಜನಿಕರು ಅದರಲ್ಲೂ ಮುಖ್ಯವಾಗಿ ರೈತ ಬಾಂಧವರು ಈ ವಿನೂತನ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

Leave a Reply

Your email address will not be published. Required fields are marked *

error: Content is protected !!