ಉದಯವಾಹಿನಿ, ಮೈಸೂರು: ಪೆಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ. ಆದರೆ ಬಿಗಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ವೈಫಲ್ಯತೆ ಇದೆ ಎಂದು ನಾನು ಆರಂಭದಲ್ಲೇ ಹೇಳಿದ್ದೆ. ಈಗ ಕೇಂದ್ರ ಸರ್ಕಾರವೂ ಅದನ್ನು ಒಪ್ಪಿಕೊಂಡಿದೆ. ಅಲ್ಲಿಗೆ ನಾನು ಹೇಳಿದ್ದು ನಿಜವಾಗಿದೆ ಎಂದರು.
ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡಬೇಕು. ನಾವು ಯುದ್ಧದ ಪರ ಇಲ್ಲ, ಶಾಂತಿ ವ್ಯವಸ್ಥೆ ಇರಬೇಕು. ಜನರಿಗೆ ಭದ್ರತೆ ಇರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಜಮ್ಮು-ಕಾಶ್ಮೀರ ಪ್ರವಾಸಿ ಸ್ಥಳ. ಅಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕಿತ್ತು. ಪುಲ್ವಾಮಾ ದಾಳಿಯ ಬಳಿಕ ಎಚ್ಚರಿಕೆಯಿಂದ ಇರಬೇಕಿತ್ತು. ಗುಪ್ತಚರ ಹಾಗೂ ಭದ್ರತೆಯ ವೈಫಲ್ಯ ಎದ್ದುಕಾಣುತ್ತಿದೆ ಎಂದರು.
ಜಮ್ಮು-ಕಾಶ್ಮೀರದಲ್ಲಿ ಸುರಕ್ಷಿತ ವಾತಾವರಣ ಇದೆ ಎಂದು ಜನ ನಂಬಿ ಪ್ರವಾಸ ಹೋಗುತ್ತಿದ್ದರು. ಕೇಂದ್ರದವರಿಗೆ ರಕ್ಷಣೆ ನೀಡಲು ಸಾಧ್ಯವಾಗಿಲ್ಲ, 26 ಮಂದಿಯ ಜೀವ ಹೋಗಿದೆ. ಈಗ ಏನೆಲ್ಲಾ ಕ್ರಮ ಕೈಗೊಂಡರೂ ಅಷ್ಟು ಜೀವಗಳು ವಾಪಸ್ ಬರುತ್ತವೆಯೇ? ಎಂದರು.

Leave a Reply

Your email address will not be published. Required fields are marked *

error: Content is protected !!