ಉದಯವಾಹಿನಿ, ಸೂರತ್: ಅಕ್ರಮ ಪಾಕ್ ವಲಸಿಗರ ಜೊತೆಗೆ ಬಾಂಗ್ಲಾದೇಶ ಅಕ್ರಮ ವಲಸೆಗಾರರನ್ನು ಬಂಧಿಸುವ ಕಾರ್ಯವನ್ನು ಗುಜರಾತ್ ಕೈಗೆತ್ತಿಕೊಂಡಿದೆ.ಇದುವರೆಗೂ ಸಾವಿರಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಅಹಮದಾಬಾದ್ ಮತ್ತು ಸೂರತ್‌ನಲ್ಲಿ ಬಂಧಿಸಲಾಗಿದೆ.ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಎಲ್ಲ ಪ್ರಕ್ರಿಯೆಗಳು ನಡೆದ ನಂತರ ಅವನ್ನು ಗಡಿಪಾರು ಮಾಡುವುದಾಗಿ ಗುಜರಾತ್ ಪೊಲೀಸರು ಹೇಳಿದ್ದಾರೆ.
ವಿಶೇಷ ಕಾರ್ಯಾಚರಣೆ ಗುಂಪು, ಅಪರಾಧ ಶಾಖೆ, ಮಾನವ ಕಳ್ಳಸಾಗಣೆ ವಿರೋಧಿ ಘಟಕ, ಅಪರಾಧ ಶಾಖೆ ತಡೆ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಸೇರಿದಂತೆ ಅನೇಕ ಘಟಕಗಳು ಹಾಗೂ ಇಲಾಖೆಗಳು ಈ ಕಾರ್ಯಾಚರಣೆಗಳನ್ನು ನಡೆಸಿವೆ.
ಬಂಧನವಾಗಿರುವ ಎಲ್ಲ ಪ್ರಜೆಗಳು ಯಾವುದೇ ಪ್ರಮುಖ ದಾಖಲೆಗಳು ಇಲ್ಲದೆ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ಜತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಭಾರತದಲ್ಲಿ ವಾಸವಾಗಿದ್ದಾರೆ ಎಂದು ಹೇಳಲಾಗಿದೆ.ಸೂರತ್‌ನಲ್ಲಿ ಸ್ಥಳೀಯ ಪೊಲೀಸರು ಜಂಟಿಯಾಗಿ ರಾತ್ರಿ ಹೊತ್ತಿನಲ್ಲಿ ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.
