ಉದಯವಾಹಿನಿ, ನವದೆಹಲಿ: ಜಮು ಮತ್ತು ಕಾಶ್ಮೀರದ ಪಹಲ್ಗಾಮ್‌ ದಾಳಿಯಿಂದ ಸಂತ್ರಸ್ತರು ದುಃಖಿಸುತ್ತಿರುವ ದೃಶ್ಯಗಳನ್ನು ನೋಡಿದರೆ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ. ಭಯೋತ್ಪಾದನಾ ದಾಳಿಯ ಹಿಂದಿನ ಭಯೋತ್ಪಾದಕರು ಮತ್ತು ಪಿತೂರಿಯಲ್ಲಿ ಭಾಗಿಯಾದವರಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು.
ಸಂತ್ರಸ್ತರಿಗೆ ನ್ಯಾಯ ಸಿಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೆ ಗುಡುಗಿದ್ದಾರೆ. ಭಾನುವಾರ ತಮ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 121 ನೇ ಸಂಚಿಕೆಯಲ್ಲಿ ಮಾತನಾಡಿದ ಮೋದಿ ಅವರು, ಪಹಲ್ಗಾಮ್‌ ದಾಳಿಯಿಂದ ನನಗೆ ತುಂಬಾ ನೋವಾಗಿದೆ. ಇದು ಭಯೋತ್ಪಾದನೆಯ ಬೆಂಬಲಿಗರ ಹತಾಶೆ ಅವರ ಹೇಡಿತನವನ್ನು ತೋರಿಸುತ್ತದೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಅಪರಾಧ ಎಸಗಿದವರಿಗೆ, ಬೆಂಬಲಿಗರಿಗೆ, ಸೂತ್ರಧಾರಿಗಳವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದರು.
ಈ ದಾಳಿಯು ನನ್ನ ಹೃದಯದಲ್ಲಿ ಆಳವಾದ ದುಃಖವನ್ನು ಉಂಟು ಮಾಡಿದೆ. ಎಪ್ರಿಲ್‌ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಪ್ರತಿಯೊಬ್ಬ ನಾಗರಿಕನ ಹೃದಯವನ್ನು ಮುರಿಯುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನು ಆಳವಾದ ಸಹಾನುಭೂತಿಯನ್ನು ಹೊಂದಿದ್ದಾರೆ.
ದಾಳಿಯಿಂದಾಗಿ ಭಾರತದ ಪ್ರತಿಯೊಬ್ಬ ಪ್ರಜೆಯೂ ಕೋಪದಿಂದ ಕುದಿಯುತ್ತಿದ್ದಾರೆ ಎಂಬುದನ್ನು ಅವರು ಅರ್ಥ ಮಾಡಿಕೊಂಡಿದ್ದಾರೆ. ಭಯೋತ್ಪಾದನೆಯ ಸವಾಲನ್ನು ಎದುರಿಸುವ ನಮ್ಮ ಸಂಕಲ್ಪವನ್ನು ಬಲಪಡಿಸುವಂತೆ ಅವರು ದೇಶದ ಜನತೆಗೆ ಕರೆ ನೀಡಿದರು. ಭಯೋತ್ಪಾದನಾ ದಾಳಿಯ ಹಿಂದಿನ ಭಯೋತ್ಪಾದಕರು ಮತ್ತು ಪಿತೂರಿಯಲ್ಲಿ ಭಾಗಿಯಾದವರಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು.ಸಂತ್ರಸ್ತರಿಗೆ ನ್ಯಾಯ ಸಿಗುತ್ತದೆ. ಘಟನೆಯ ಹಿಂದಿನ ಮಾಸ್ಟರ್‌ ಮೈಂಡ್‌ಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ನಾನು ಮತ್ತೊಮ್ಮೆ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ನ್ಯಾಯ ಸಿಗಲಿದೆ ಎಂದು ಭರವಸೆ ನೀಡುತ್ತೇನೆ ಎಂದು ಶಪಥ ಮಾಡಿದರು.

Leave a Reply

Your email address will not be published. Required fields are marked *

error: Content is protected !!