ಉದಯವಾಹಿನಿ, ಇಸ್ಲಾಮಬಾದ್: ಒಪ್ಪೋತ್ತಿನ ಉಟಕ್ಕೂ ವಿಶ್ವದ ಮುಂದೆ ಆಂಗಲಾಚುತ್ತಿರುವ ಪಾಕಿಸ್ತಾನ ತನ್ನ ದುರಂಹಕಾರವನ್ನು ಮಾತ್ರ ಕಡಿಮೆ ಮಾಡುತ್ತಿಲ್ಲ. ಹೊಟ್ಟೆಗೆ ಇಟ್ಟು ಇಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು ಎಂಬಂತೆ ಭಾರತದ ವಿರುದ್ದ ಅಲ್ಲಿನ ಸಚಿವನೊಬ್ಬ ಅತಿರೇಕದ ಹೇಳಿಕೆಯನ್ನು ನೀಡಿದ್ದಾನೆ. ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದು, ಘೋರಿ, ಶಾಹೀನ್ ಮತ್ತು ಘಜ್ಞವಿ ಕ್ಷಿಪಣಿಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಒಳಗೊಂಡಂತೆ ಪಾಕಿಸ್ತಾನದ ಶಸ್ತ್ರಾಗಾರವನ್ನು ಭಾರತಕ್ಕಾಗಿ ಮಾತ್ರ ಇಡಲಾಗಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾನೆ.
ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಮೂಲಕ ಭಾರತ ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ಧೈರ್ಯ ಮಾಡಿದರೆ, ಅದು ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು. ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು ಪ್ರದರ್ಶನಕ್ಕೆ ಅಲ್ಲ, ಮತ್ತು ಅವುಗಳ ಸ್ಥಳಗಳು ದೇಶಾದ್ಯಂತ ಅಡಗಿಕೊಂಡಿವೆ, ಪ್ರಚೋದಿಸಿದರೆ ದಾಳಿ ಮಾಡಲು ಸಿದ್ಧವಾಗಿವೆ ಎಂದು ಅವರು ಘೋಷಿಸಿದ್ದಾನೆ.
ಅವರು ನಮಗೆ ನೀರು ಸರಬರಾಜು ಮಾಡುವುದನ್ನು ನಿಲ್ಲಿಸಿದರೆ, ಅವರು ಯುದ್ಧಕ್ಕೆ ಸಿದ್ದರಾಗಿರಬೇಕು. ನಮ್ಮಲ್ಲಿರುವ ಮಿಲಿಟರಿ ಉಪಕರಣಗಳು, ನಮ್ಮಲ್ಲಿರುವ ಕ್ಷಿಪಣಿಗಳು, ಅವು ಪ್ರದರ್ಶನಕ್ಕೆ ಅಲ್ಲ. ನಾವು ದೇಶಾದ್ಯಂತ ನಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದೇವೆಂದು ಯಾರಿಗೂ ತಿಳಿದಿಲ್ಲ.

Leave a Reply

Your email address will not be published. Required fields are marked *

error: Content is protected !!