ಉದಯವಾಹಿನಿ, ದೇವನಹಳ್ಳಿ ಬೆಂಗ್ರಾ : ೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. ೭೩.೭೧% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಒಂಬತ್ತನೆಯ ಸ್ಥಾನ ಪಡೆದುಕೊಂಡಿದೆ.
ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಮೊದಲ ಬಾರಿ ಪರೀಕ್ಷೆ ಎದುರಿಸಿದ ೧೩೬೪೩ ವಿದ್ಯಾರ್ಥಿಗಳ ಪೈಕಿ ೧೦೦೫೭ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ ೭೩.೭೧ ರಷ್ಟು ಫಲಿತಾಂಶ ದೊರಕಿದೆ.ಪರೀಕ್ಷೆಗೆ ಒಟ್ಟು ೬೮೦೩ ಬಾಲಕರು ಹಾಜರಾಗಿದ್ದು, ೪೫೭೬ ಬಾಲಕರು ತೇರ್ಗಡೆಯಾಗುವ ಮೂಲಕ ಶೇ. ೬೭.೨೬ ರಷ್ಟು ಫಲಿತಾಂಶ ಪಡೆದಿದ್ದಾರೆ. ೬೮೪೦ ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, ೫೪೮೧ ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ ೮೦.೧೩ ರಷ್ಟು ಫಲಿತಾಂಶ ದೊರಕಿದೆ. ನಗರ ಪ್ರದೇಶದ ೮೫೭೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೬೪೫೯ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ ೭೫.೩೧ ರಷ್ಟು ಫಲಿತಾಂಶ ದೊರೆತಿದೆ.
ಗ್ರಾಮೀಣ ಪ್ರದೇಶದ ೫೦೬೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜ ರಾಗಿ ೩೫೯೮ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ ೭೧.೦೦ ರಷ್ಟು ಫಲಿತಾಂಶ ಸಿಕ್ಕಿದೆ.
ದೇವನಹಳ್ಳಿ ತಾಲ್ಲೂಕಿನಲ್ಲಿ ೩೨೫೫ ವಿದ್ಯಾರ್ಥಿಗಳು ಹಾಜರಾಗಿದ್ದು ೨೫೫೦ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. ೭೮.೩೪ ರಷ್ಟು ಫಲಿತಾಂಶ ಪಡೆದಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ೩೬೫೪ ವಿದ್ಯಾರ್ಥಿಗಳು ಹಾಜರಾಗಿದ್ದು ೨೫೬೧ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. ೭೦.೦೮ ರಷ್ಟು ಫಲಿತಾಂಶ ಪಡೆದಿದ್ದಾರೆ.ಹೊಸಕೋಟೆ ತಾಲ್ಲೂಕಿನಲ್ಲಿ ೩೬೨೫ ವಿದ್ಯಾರ್ಥಿಗಳು ಹಾಜರಾಗಿದ್ದು ೨೬೪೬ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. ೭೨.೯೯ ರಷ್ಟು ಫಲಿತಾಂಶ ಪಡೆದಿದ್ದಾರೆ.ನೆಲಮಂಗಲ ತಾಲ್ಲೂಕಿನಲ್ಲಿ ೩೧೦೯ ವಿದ್ಯಾರ್ಥಿಗಳು ಹಾಜರಾಗಿದ್ದು ೨೩೦೦ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. ೭೩.೯೭ ರಷ್ಟು ಫಲಿತಾಂಶ ಪಡೆದಿದ್ದಾರೆ.

ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಟಾಪರ್ ಗಳು: ದೇವನಹಳ್ಳಿ ತಾಲ್ಲೂಕಿನ ವಿಜಯ ಪುರ ಹೋಬಳಿಯ ನೀಲಗಿರೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿ ಸಿ.ಭಾವನಾ ಹಾಗೂ ದೊಡ್ಡಬಳ್ಳಾಪುರ ಟೌನ್ ನ ಮೇಳೆಕೋಟೆ ಕ್ರಾಸ್ನಲ್ಲಿರುವ ಎಸ್.ಜಿ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೫ ಕ್ಕೆ ೬೨೫ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!