ಉದಯವಾಹಿನಿ, ಬೆಂಗಳೂರು: ಎಪಿಎಸ್ ಶಿಕ್ಷಣ ಸಂಸ್ಥೆಯಿಂದ ಮಹಾ ಶಿಕ್ಷಣ ಎಕ್ಸ್ ಪೋ ಮತ್ತು ಬೃಹತ್ ಉದ್ಯೋಗ ಮೇಳವನ್ನು ಎನ್.ಆರ್. ಕಾಲೊನಿಯ ಕ್ಯಾಂಪಸ್ ನಲ್ಲಿ ಆಯೋಜಿಸಿತ್ತು.
ಈ ಕಾರ್ಯಕ್ರಮವನ್ನು ಎಐಸಿಟಿಇ ಅಧ್ಯಕ್ಷ ಪ್ರೊ. ಟಿ. ಜಿ. ಸೀತಾರಾಮ್ ಉದ್ಘಾಟಿಸಿ, ವಿದ್ಯಾರ್ಥಿಗಳಲ್ಲಿ ಭವಿಷ್ಯದ ಬಗ್ಗೆ ನೈತಿಕ ಬದ್ಧತೆ ಇದ್ದು, ಇದನ್ನು ಸಕಾರಗೊಳಿಸಲು ಅವಿರತವಾಗಿ ಶ್ರಮಿಸುವ ಅಗತ್ಯವಿದೆ. ಈ ಕನಸು ನನಸು ಮಾಡಲು ಯಾವುದೇ ನೋಂದಣಿ ಶುಲ್ಕವಿಲ್ಲದೇ ಉದ್ಯೋಗ ಮೇಳ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಎಂದರು.
ಎಪಿಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವಿಷ್ಣು ಭಾರತ ಅಲಂಪಲ್ಲಿ ಮಾತನಾಡಿ, ನಮ್ಮ ಸಂಸ್ಥೆ ಶೈಕ್ಷಣಿಕ ಚಟುವಟಿಕೆ ಜೊತೆಗೆ ಜಾಗತೀಕರಣ ಯುಗದಲ್ಲಿ ಉತ್ತಮ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಲು ತಯಾರಾಗುವಂತೆ ಮಾರ್ಗದರ್ಶನ ನೀಡುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ ಎಂದರು. ಪ್ರತಿಷ್ಠಿತ ಕಂಪನಿಗಳ ೧೦೦ಕ್ಕೂ ಹೆಚ್ಚು ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದವು. ಕೆಲವರಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ನೀಡಲಾಯಿತು.

Leave a Reply

Your email address will not be published. Required fields are marked *

error: Content is protected !!