ಉದಯವಾಹಿನಿ, ನವದೆಹಲಿ: ರಾಜ್ಯದ ಧಾರವಾಡ ಐಐಟಿ ಸೇರಿದಂತೆ ದೇಶದ ಐದು ಐಐಟಿಗಳಲ್ಲಿ 11,828.79 ಕೋಟಿ ರೂ. ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ(ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದು ಹೇಳಿದ್ದಾರೆ.
ಈ ಐದು ಪ್ರಮುಖ ಐಐಟಿಗಳಲ್ಲಿ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವಂತೆ ಸೌಲಭ್ಯಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ, ಕೈಗಾರಿಕೆ-ಶೈಕ್ಷಣಿಕ ಸಂಪರ್ಕವನ್ನು ಬಲಪಡಿಸಲು ಐದು ಹೊಸ ಅತ್ಯಾಧುನಿಕ ಸಂಶೋಧನಾ ಪಾರ್ಕ್‌ಗಳು ಸಹ ಈ ಯೋಜನೆಯಲ್ಲಿ ಬರಲಿವೆ.
