ಉದಯವಾಹಿನಿ, ಚೆನ್ನೈ: ಹಿಂದೂ ಧಾರ್ಮಿಕ ಮತ್ತು ದತ್ತಿ ದತ್ತಿ ಇಲಾಖೆಯ ನಿಯಂತ್ರಣದಲ್ಲಿರುವ ದೇವಾಲಯವೊಂದರ ಪ್ರಸಾದದಲ್ಲಿ ಸತ್ತ ಹಾವು ಪತ್ತೆಯಾಗಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.ಪ್ರಸಾದದಲ್ಲಿ ಸತ್ತ ಹಾವು ಪತ್ತೆಯಾಗಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ದೇವಸ್ಥಾನದಲ್ಲಿ ನೀಡಲಾದ ಪುಳಿಯೊಗರೆ ಪ್ರಸಾದದಲ್ಲಿ ಈ ಹಾವು ಪತ್ತೆಯಾಗಿದ್ದು, ಪ್ರಸಾದದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ ಎಂದು ಹೇಳಲಾಗಿದೆ.
ಖಾತೆದಾರರು ಈ ಫೋಟೊವನ್ನು ಹಂಚಿಕೊಂಡಿದ್ದು ನಿರ್ಲಕ್ಷಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮೂಲಗಳ ಪ್ರಕಾರ ತಮಿಳುನಾಡಿನ 800 ವರ್ಷಗಳಷ್ಟು ಹಳೆಯ ಚಂದ್ರಚೂಡೇಶ್ವರ ದೇಗುಲದಲ್ಲಿ ಈ ಘಟನೆ ವರದಿಯಾಗಿದ್ದು, ಪ್ರತಿನಿತ್ಯ ಈ ದೇಗುಲಕ್ಕೆ 800 ರಿಂದ 1000 ಜನರು ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಇಂತಹ ದೇಗುಲದ ಪ್ರಸಾದದಲ್ಲೇ ಸತ್ತ ಹಾವು ಪತ್ತೆಯಾಗಿರುವ ವಿಚಾರ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.ಅಂದಹಾಗೆ ಬೆಂಗಳೂರು ಮತ್ತು ಕೃಷ್ಣಗಿರಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ದೇವಾಲಯವು ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ.

Leave a Reply

Your email address will not be published. Required fields are marked *

error: Content is protected !!