ಉದಯವಾಹಿನಿ, ನವದೆಹಲಿ: ಜಮು ಮತ್ತು ಕಾಶೀರದ ಪಲ್ಗಾಮ್‌ನಲ್ಲಿ ನಡೆದಿದ್ದ ನರಮೇಧಕ್ಕೆ ಪ್ರತಿಯಾಗಿ ಪಾಕಿಸ್ತಾನ ಹಾಗೂ ಪಿಒಕೆಯ ಉಗ್ರಗಾಮಿ ನೆಲೆಗಳ ಮೇಲೆ ಭಾರತದ ಸೇನಾ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಸರ್ವಪಕ್ಷಗಳ ಸಭೆಯಲ್ಲಿ ಪಕ್ಷಾತೀತವಾಗಿ ಒಗ್ಗಟ್ಟಿನ ಮಂತ್ರ ಪಠಿಸಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆ ಬಗ್ಗೆ ಕೇಂದ್ರ ಸರ್ಕಾರ ಪ್ರತಿಪಕ್ಷಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ, ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆಗೆ ಸೇನಾಪಡೆಗಳನ್ನು ಅಭಿನಂದಿಸಲಾಯಿತು.
ಇದೇ ವೇಳೆ ಭಾರತದ ರಕ್ಷಣೆ ವಿಚಾರವಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರಗಳನ್ನು ಬೆಂಬಲಿಸುವುದಾಗಿ ವಿಪಕ್ಷ ನಾಯಕರು ಮತ್ತೊಮೆ ಭರವಸೆ ನೀಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಸಚಿವರಾದ ಜೆ.ಪಿ.ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದರು.
ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನಿಂದ ಪ್ರತಿನಿಧಿಸಿದರೆ, ತೃಣಮೂಲ ಕಾಂಗ್ರೆಸ್‌ನಿಂದ ಸಂದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿ.ಆರ್.ಬಾಲು, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವಸೇನೆಯ (ಯುಬಿಟಿ) ಸಂಜಯ್ ರಾವುತ್, ಎನ್ ಸಿ ಪಿ (ಎಸ್ಪಿ) ಸುಪ್ರಿಯಾ ಸುಳೆ, ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಬಿಜೆಡಿಯ ಸಸಿತ್ ಪಾತ್ರ ಸೇರಿದಂತೆ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. ಜೆಡಿ(ಯು) ನಾಯಕ ಸಂಜಯ್ ಝಾ, ಕೇಂದ್ರ ಸಚಿವ ಮತ್ತು ಎಲ್‌ಪೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು.
