ಉದಯವಾಹಿನಿ, ಕೊಲ್ಕತ್ತ: ನಿಷೇಧಿತ ಜಮಾತುಲ್ಲಾ ಮುಜಾ ಹಿದ್ದೀನ್ ಬಾಂಗ್ಲಾದೇಶ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಬೀರ್ ಭೂಮ್ ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳ ವಿಶೇಷ ಕಾರ್ಯ ಪಡೆ ಪೊಲೀಸರು ಬಂಧಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.ಬಂಧಿತರನ್ನು ಅಜ್ಮೋಲ್ ಹೊಸೈನ್ ಮತ್ತು ಸಾಹೇಬ್ ಅಲಿ ಖಾನ್ ಎಂದು ಗುರುತಿಸಲಾಗಿದೆ. ಅವರನ್ನು ಮೇ 8 ಮತ್ತು 9ರ ಮಧ್ಯರಾತ್ರಿ ನಲ್ಹಾಟಿ ಮತ್ತು ಮುರಾರೈ ಪ್ರದೇಶಗಳಿಂದ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬಂಧಿತರು ಭಯೋತ್ಪಾದಕ ಸಂಘಟನೆ ಸೇರಲು ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ಪ್ರೇರೇಪಿಸುವಲ್ಲಿ ತೊಡಗಿದ್ದರು ಮತ್ತು ಅವರನ್ನು ಭಾರತದ ವಿರುದ್ಧ ಯುದ್ಧ ಮಾಡುವ ಉದ್ದೇಶದೊಂದಿಗೆ ಮೂಲಭೂತೀಕರಣ ಮಾಡಲಾಗುತಿತ್ತು ಎಂದು ಅವರು ತಿಳಿಸಿದ್ದಾರೆ.ಈ ಹಿಂದೆ ಜಿಹಾದಿ ಚಟುವಟಿಕೆಗಳನ್ನು ನಡೆಸಲು ಬಾಂಗ್ಲಾದೇಶ ದಾಟಲು ಯತ್ನಿಸಿದ್ದ ಹೊಸೈನ್ ಉಪಖಂಡದ ಇತರ ಭಾಗಗಳಲ್ಲಿ ಸಂಪರ್ಕ ಹೊಂದಿದ್ದಾನೆ. ಇವರಿಬ್ಬರು ಇತರ ಸಹಚರರೊಂದಿಗೆ ವಿಧ್ವಂಸಕ ಚಟುವಟಿಕೆಗಳಿಗಾಗಿ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಸಂಗ್ರಹಿಸಲು ಪ್ರಯತ್ನಿಸಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Leave a Reply

Your email address will not be published. Required fields are marked *

error: Content is protected !!