ಉದಯವಾಹಿನಿ,ಬೆಂಗಳೂರು: ಬೆಂಗಳೂರಿಗೆ ಹೊಸ ರೂಪ ನೀಡಿ, ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜೊತೆ ಇಂದು ಮೊದಲ ಸಭೆ ಮಾಡಲಾಗಿದೆ. ಮೊದಲು ಎಲ್ಲಾ ಪಕ್ಷಗಳ ಶಾಸಕರ ಅಭಿಪ್ರಾಯ ಪಡೆದಿದ್ದೆ. ಈಗ ಕೈಗಾರಿಕೆ, ಬಂಡವಾಳ ಹೂಡಿಕೆದಾರರ ಅಭಿಪ್ರಾಯ ಪಡೆದಿದ್ದೇನೆ. ಮುಂದೆ ಮತ್ತೊಂದು ಹಂತದ ಸಭೆ ಮಾಡುತ್ತೇನೆ. ಮುಂದಿನ ವಾರ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು. ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಸೇರಿ ಒಂದು ಸಮಿತಿ ರಚಿಸಿ, ಬೆಂಗಳೂರಿನ ಅಭಿವೃದ್ಧಿಗೆ ಆರು ತಿಂಗಳಲ್ಲಿ ನೀಲನಕ್ಷೆ, ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ತಿಳಿಸಿದರು. ‘ಬ್ರ್ಯಾಂಡ್​ ಬೆಂಗಳೂರು’ ಹೆಸರಿನಡಿ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇಂದು ಸಭೆಗೆ ಬಂದವರು ತಮ್ಮ ಸ್ವಾರ್ಥ ಬಿಟ್ಟು, ಸಮಾಜಕ್ಕೆ ತಮ್ಮ ಕೊಡುಗೆ ನೀಡಲು ಸರ್ಕಾರದ ಜತೆ ಕೈ ಜೋಡಿಸಿ ಸಲಹೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು. ಹೈ ಡೆನ್ಸಿಟಿ ಕಾರಿಡಾರ್, ಕಸ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ಉತ್ತಮ ಗುಣಮಟ್ಟದ ಶಿಕ್ಷಣ, ಕೊಳಗೇರಿ ಪ್ರದೇಶ ಅಭಿವೃದ್ಧಿ, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ, ಕೆಲವು ಪ್ರದೇಶ 24/7 ತೆರೆಯಲು, ವಾಹನ ನಿಲುಗಡೆ, ಭ್ರಷ್ಟಾಚಾರ ನಿಯಂತ್ರಣ ಸೇರಿದಂತೆ ಅನೇಕ ಸಲಹೆ ನೀಡಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!