ಉದಯವಾಹಿನಿ, ನವದೆಹಲಿ: ಪ್ರಸಕ್ತ ವರ್ಷದ ನೈಋತ್ಯ ನೈರುತ್ಯ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಐದು ದಿನಗಳು ಮುಂಚಿತವಾಗಿ ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಜೂನ್ ಒಂದರಂದು ನೈರುತ್ಯ ಮುಂಗಾರು ಕೇರಳವನ್ನು ಪ್ರವೇಶಿಸುವುದು ವಾಡಿಕೆ. ಆದರೆ, ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಈ ಬಾರಿ 5 ದಿನಗಳು ಮುಂಚಿತವಾಗಿಯೇ ಅಂದರೆ ಮೇ 27ರಂದೇ ನೈರುತ್ಯ ಮುಂಗಾರು ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ನಂತರ ಒಂದೆರಡು ದಿನಗಳಲ್ಲಿ ಕರ್ನಾಟಕದ ಪಶ್ಚಿಮ ಕಾರವಳಿಯನ್ನು ಮುಂಗಾರು ಪ್ರವೇಶಿಸುತ್ತದೆ. ನಿರೀಕ್ಷೆಯಂತೆ, ಕೇರಳಕ್ಕೆ ಮುಂಗಾರು ಮೇ 27ಕ್ಕೆ ಆಗಮಿಸಿದರೆ, 16 ವರ್ಷಗಳ ಬಳಿಕ ಮೊದಲ ಬಾರಿಗೆ ಭಾರತದ ಮುಖ್ಯ ಭೂ ಭಾಗಗಳಲ್ಲಿ ನೈರುತ್ಯ ಮುಂಗಾರು ಬಹು ಬೇಗನೆ ಆರಂಭವಾದಂತಾಗಲಿದೆ. ಇದಕ್ಕೂ ಮುನ್ನ 2009ರಲ್ಲಿ ಮೇ 23ರಂದು ಕೇರಳಕ್ಕೆ ನೈರುತ್ಯ ಮುಂಗಾರು ಆಗಮಿಸಿತ್ತು.
ಕೇರಳವನ್ನು ಪ್ರವೇಶಿದ ನಂತರ ಭಾರತದ ಮುಖ್ಯ ಭೂ ಭಾಗಗಳಿಗೆ ಮಳೆ ಆಗಮಿಸುವ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ. ಸಾಮಾನ್ಯವಾಗಿ ಜೂನ್ 1ಕ್ಕೆ ಕೇರಳಕ್ಕೆ ಆಗಮಿಸುವ ಮುಂಗಾರು ಮಳೆ ಜೂನ್ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಮರಳಲು ಆರಂಭಿಸಿ, ಅಕ್ಟೋಬರ್ 15ರ ವೇಳೆಗೆ ಸಂಪೂರ್ಣವಾಗಿ ಹಿಂದಿರುಗಲಿದೆ.

Leave a Reply

Your email address will not be published. Required fields are marked *

error: Content is protected !!